ಸದನಕ್ಕೆ ತಪ್ಪು ಮಾಹಿತಿ: ವಿಪಕ್ಷಗಳಿಂದ ಸುಷ್ಮಾ ಸ್ವರಾಜ್ ವಿರುದ್ಧ ನಿಲುವಳಿ ಸೂಚನೆ ಮಂಡನೆ
ವಿದೇಶಾಂಗ ನೀತಿಯ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ...
Published On :
ನವದೆಹಲಿ: ವಿದೇಶಾಂಗ ನೀತಿಯ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಶುಕ್ರವಾರ ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿವೆ.
ಪ್ರಧಾನಿ ನರೇಂದ್ರ ಮೋದಿಯವರ ಲಾಹೋರ್ ಭೇಟಿ ಕುರಿತು ತಪ್ಪು ಮಾಹಿತಿ ನೀಡಿದ್ದಾರೆಂದು ವಿರೋಧ ಪಕ್ಷಗಳು ಆರೋಪ ಮಾಡಿವೆ. ಮೋದಿ ಲಾಹೋರ್ ಭೇಟಿಯ ನಂತರ ಭಾರತದಲ್ಲಿ ಯಾವುದೇ ಭಯೋತ್ಪಾದಕ ದಾಳಿಗಳು ನಡೆದಿಲ್ಲ ಎಂದು ಸದನಕ್ಕೆ ಮಾಹಿತಿ ನೀಡಲಾಗಿತ್ತು. ಆದರೆ ಪ್ರಧಾನಿ ಲಾಹೋರ್ ಭೇಟಿ ನೀಡಿದ ಕೆಲ ದಿನಗಳಲ್ಲಿ ಪಠಾಣ್ ಕೋಟ್ ಸೇನಾನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದರು. ಅಲ್ಲದೆ ಇದೇ ರೀತಿ ಐದು ಉಗ್ರ ದಾಳಿಗಳು ಭಾರತದಲ್ಲಿ ನಡೆದಿದ್ದವು ಎಂದು ವಿಪಕ್ಷಗಳು ಆರೋಪಿಸಿದ್ದವು.
ಈ ನಡುವೆ ವಿರೋಧ ಪಕ್ಷಗಳ ಆರೋಪವನ್ನು ತಳ್ಳಿ ಹಾಕಿರುವ ಸುಷ್ಮಾ ಸ್ವರಾಜ್ ಅವರು, ನಾನು ಬ್ಯಾಂಬರ್ಗ್ ಏಷ್ಯಾ ಆಫ್ರಿಕಾ ಸಂಬಂಧಗಳ ಸಮಾವೇಶದ ವೇಳೆ ಯಾವುದೇ ರೀತಿಯ ಹೇಳಿಕೆಯನ್ನು ನೀಡಿಲ್ಲ. ವಿರೋಧ ಪಕ್ಷಗಳು ಉದ್ದೇಶಿತ ಕೆಲ ವಿಡಿಯೋಗಳನ್ನು ತೆಗೆದುಕೊಂಡು ಅದನ್ನೇ ಸಾಕ್ಷ್ಯಾಧಾರವೆಂಬಂತೆ ತೋರಿಸುತ್ತಿವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
oppositionSushma Swarajಸುಷ್ಮಾ ಸ್ವರಾಜ್Rajya Sabhaರಾಜ್ಯಸಭೆವಿರೋಧ ಪಕ್ಷಗಳುPrivilege motionsಹಕ್ಕುಚ್ಯುತಿ ನಿರ್ಣಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

