ಉತ್ತರಾಖಂಡ್: ಗೋವಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ- ಕಾಮುಕನ ಬಂಧನ
ಗೋವಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ...

Published On :
ಡೆಹ್ರಾಡೂನ್: ಗೋವಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.
ಡೆಹ್ರಾಡೂನ್ ನ ಪೌರಿ ಜಿಲ್ಲೆಯ ಸತ್ಪುಲಿ ಪಟ್ಟಣದಲ್ಲಿ ಘಟನೆ ನಡೆಸಿದೆ. 23 ವರ್ಷದ ವ್ಯಕ್ತಿಯೊಬ್ಬ ಗೋವಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸುತ್ತಿದ್ದನೆಂದು ಪೊಲೀಸರು ಕಾಮುಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ದಿ ಹರಡುತ್ತಿದ್ದಂತೆಯೇ ಎಬಿವಿಪಿ ಹಾಗೂ ಬಜರಂಗದಳದ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಕಾಮುಕನಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.
ಇದರೊಂದಿಗೆ ಸತ್ಪುಲಿ ಮಾರುಕಟ್ಟೆ ಬಂದ್ ಮಾಡಿಸಿರುವ ಪ್ರತಿಭಟನಾಕಾರರು, ಆರೋಪಿಯ ಒಡೆತನಕ್ಕೆ ಸೇರಿದ್ದ ಅಂಗಡಿಯನ್ನು ಧ್ವಂಸಗೊಳಿಸಿ, ಅಲ್ಲಿನ ಪೀಟೋಪಕರಣಗಳನ್ನು ಒಡೆದು ಹಾಕಿದ್ದಾರೆ.
ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿರುವ ಪೊಲೀಸರು, ಬಿಗಿ ಬಂದೋಬಸ್ತ್ ಮಾಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


