ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸಹಾಯ ಮಾಡುತ್ತಿಲ್ಲ: ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರ ಸಹಾಯ ಮಾಡುತ್ತಿಲ್ಲ ಎಂದು....

Published On :
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರ ಸಹಾಯ ಮಾಡುತ್ತಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆರೋಪಿಸಿದ್ದಾರೆ.
ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಸ್ತೆಗಳು ಕೊಚ್ಚಿ ಹೋಗಿವೆ, ಸೇತುವೆಗಳು ಕುಸಿದು ಬಿದ್ದಿವೆ ಮತ್ತು ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ ಎಂದು ಮಮತಾ ಬ್ಯಾನರ್ಜಿ ಅವರು ತಿಳಿಸಿದ್ದಾರೆ.
ಪ್ರವಾಹದಿಂದಾಗಿ 14 ಜಿಲ್ಲೆಗಳಲ್ಲಿ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 4 ಲಕ್ಷ ಹೆಕ್ಟರ್ ಕೃಷಿ ಭೂಮಿ ನೀರಿನಲ್ಲಿ ಕೊಚ್ಚಿ ಹೋಗಿದೆ. ಆದರೆ ಕೇಂದ್ರ ಸರ್ಕಾರ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ನಮಗೆ ಯಾವುದೇ ಸಹಾಯ ಮಾಡುತ್ತಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ದೂರಿದ್ದಾರೆ.
ಹೌರಾ, ಹೂಗ್ಲಿ, ಬಿರ್ಭೂಮ್ ಮತ್ತು ಮಿಡ್ನಾಪೋರ್ ಗಳಲ್ಲಿ ಪ್ರವಾಹ ಪರಿಸ್ಥಿತಿ ಅತ್ಯಂತ ತೀವ್ರವಾಗಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


