ದಾಳಿ ಪ್ರಕರಣ: ಓರ್ವ ಬಿಜೆಪಿ ನಾಯಕನ ಬಂಧನ; ಪ್ರತಿಭಟನೆ ಬಿಟ್ಟು ಸಂತ್ರಸ್ತರಿಗೆ ನೆರವಾಗಲು ರಾಹುಲ್ ಕರೆ
ಆ.02 ರಂದು ತಮ್ಮ ಮೇಲೆ ನಡೆದ ದಾಳಿಯನ್ನು ಪ್ರತಿಭಟಿಸುವ ಬದಲು ಗುಜರಾತ್ ನಲ್ಲಿ ಪ್ರವಾಹಕ್ಕೆ ಸಿಲುಕಿದವರಿಗೆ ಸಹಾಯ ಮಾಡಿ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರಿಗೆ...

Published On :
ನವದೆಹಲಿ: ಆ.02 ರಂದು ತಮ್ಮ ಮೇಲೆ ನಡೆದ ದಾಳಿಯನ್ನು ಪ್ರತಿಭಟಿಸುವ ಬದಲು ಗುಜರಾತ್ ನಲ್ಲಿ ಪ್ರವಾಹಕ್ಕೆ ಸಿಲುಕಿದವರಿಗೆ ಸಹಾಯ ಮಾಡಿ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಗುಜರಾತ್ ನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ರಾಹುಲ್ ಗಾಂಧಿ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಪ್ರತಿಭಟನೆ ನಡೆಸುವುದರಲ್ಲಿ ನಿರತರಾಗಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕಾರ್ಯಕರ್ತರಿಗೆ ಕರೆ ನೀಡಿದ್ದು, ಪ್ರವಾಹಕ್ಕೆ ಸಿಲುಕಿದವರಿಗೆ ಸಹಾಯ ಮಾಡಿ ಎಂದು ಹೇಳಿದ್ದಾರೆ.
ಇದೇ ವೇಳೆ ರಾಹುಲ್ ಗಾಂಧಿ ಮೇಲಿನ ದಾಳಿ ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾದ ನಾಯಕನನ್ನು ಬಂಧಿಸಲಾಗಿದೆ. ನಿನ್ನೆ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಗುಜರಾತ್'ಗೆ ತೆರಳಿದ್ದ ವೇಳೆ ರಾಹುಲ್ ಗಾಂಧಿಯವರ ಕಾರಿನ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದರು. ಅಲ್ಲದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪರ ಘೋಷಣೆಗಳನ್ನು ಕೂಗಿದ್ದರು. ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ದವರು ನನ್ನ ಕಾರಿನ ಮೇಲೆ ದಾಳಿ ನಡೆಸಿದ್ದರು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


