ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ದೇಶಕ್ಕೆ ಪರಿಶ್ರಮ ಶ್ರದ್ಧಾಪೂರ್ವಕ ಸೇವೆ ಸಲ್ಲಿಸಲಿದ್ದಾರೆ: ಪ್ರಧಾನಿ ಮೋದಿ
ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಆಯ್ಕೆಗೊಂಡಿರುವ ಮಾಜಿ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

Published On :
ನವದೆಹಲಿ: ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಆಯ್ಕೆಗೊಂಡಿರುವ ಮಾಜಿ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದು, ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ದೇಶಕ್ಕೆ ಪರಿಶ್ರಮ ಶ್ರದ್ಧಾಪೂರ್ವಕ ಸೇವೆ ಸಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಪರಾಷ್ಟ್ರಪತಿಯಾಗಿ ಆಯ್ಕೆಗೊಂಡಿರುವ ವೆಂಕಯ್ಯ ನಾಯ್ಡು ಅವರಿಗೆ ಅಭಿನಂದನೆಗಳು, ಅತ್ಯುತ್ತಮ ಅಧಿಕಾರಾವಧಿ ಅವರದ್ದಾಗಿರಲಿ ಎಂದು ಶುಭಕೋರುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ರಾಷ್ಟ್ರದ ಅಭಿವೃದ್ಧಿಗೆ ಬದ್ಧವಾಗಿ ಪರಿಶ್ರಮ ಶ್ರದ್ಧಾಪೂರ್ವಕ ಸೇವೆ ಸಲ್ಲಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದಿರುವ ಮೋದಿ, ವೆಂಕಯ್ಯ ನಾಯ್ಡು ಅವರೊಂದಿಗೆ ಕಾರ್ಯನಿರ್ವಹಿಸಿದ ನೆನಪುಗಳನ್ನು ಹಂಚಿಕೊಂಡಿದ್ದಾರೆ.
ಯುಪಿಎ ಅಭ್ಯರ್ಥಿ ಗೋಪಾಲ್ ಕೃಷ್ಣ ಗಾಂಧಿ ವಿರುದ್ಧ ಸ್ಪರ್ಧಿಸಿದ್ದ ವೆಂಕಯ್ಯ ನಾಯ್ಡು ಅವರಿಗೆ 516 ಮತಗಳು ದೊರೆತಿದ್ದರೆ, ಪರಾಜಿತ ಅಭ್ಯರ್ಥಿ ಗೋಪಾಲ ಕೃಷ್ಣ ಗಾಂಧಿ ಅವರು 244 ಮತಗಳನ್ನು ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


