ಲವ್ ಜಿಹಾದ್ ನ ಮೊದಲ ಅರ್ಜಿ ವಿಚಾರಣೆ: ಎನ್ಐಎಯಿಂದ ಸಾಕ್ಷ್ಯ ಕೇಳಿದ ಸುಪ್ರೀಂ ಕೋರ್ಟ್
ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ವಿವಾಹವಾಗುವ ಮೂಲಕ ಲವ್ ಜಿಹಾದ್ ನಡೆಸುತ್ತಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆ.05 ರಂದು ಮೊದಲ ಅರ್ಜಿಯನ್ನು ವಿಚಾರಣೆ ನಡೆಸಿದ್ದು...

Published On :
ನವದೆಹಲಿ: ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ವಿವಾಹವಾಗುವ ಮೂಲಕ ಲವ್ ಜಿಹಾದ್ ನಡೆಸುತ್ತಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆ.05 ರಂದು ಮೊದಲ ಅರ್ಜಿಯನ್ನು ವಿಚಾರಣೆ ನಡೆಸಿದ್ದು, ಎನ್ಐಎಯಿಂದ ಸಾಕ್ಷ್ಯ ಕೇಳಿದೆ.
10 ದಿನಗಳಲ್ಲಿ ಲವ್ ಜಿಹಾದ್ ಗೆ ಸಂಬಂಧಪಟ್ಟಂತೆ ದೃಢ ಸಾಕ್ಷ್ಯಾಧಾರಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಗೆ ಸೂಚನೆ ನೀಡಿದೆ. ಕೇರಳದಲ್ಲಿ ನಡೆದ ಅಂತರ್ಧರ್ಮೀಯ ವಿವಾಹವನ್ನು ಅಲ್ಲಿನ ಹೈಕೋರ್ಟ್ ಲವ್ ಜಿಹಾದ್ ಎಂದು ಹೇಳಿರುವುದನ್ನು ಹಾಗೂ ತನ್ನ ಪತ್ನಿಯನ್ನು ಭೇಟಿ ಮಾಡಲು ಅವಕಾಶ ನೀಡಲು ನಿರಾಕರಿಸಿದ್ದನ್ನು ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು, ವ್ಯಕ್ತಿಯ ಪರ ವಾದ ಮಂಡಿಸಿರುವ ಕಪಿಲ್ ಸಿಬಲ್, ಯುವತಿಯನ್ನೇ ಕರೆಸಿ ವಿಚಾರಣೆಗೊಳಪಡಿಸಬೇಕೆಂದು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ.
ಯುವತಿಯ ಪೋಷಕರ ಪರ ವಾದ ಮಂಡಿಸಿರುವ ಮಾಧವಿ ದಿವಾನ್, ಸುಪ್ರೀಂ ಕೋರ್ಟ್ ಯುವತಿಯ ವಿಚಾರಣೆ ನಡೆಸುವುದಾದರೆ ಪೋಷಕರ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಎನ್ಐಎ ಪರ ವಕೀಲರಿಗೆ 10 ದಿನಗಳಲ್ಲಿ ಸೂಕ್ತ ಸಾಕ್ಷ್ಯಾಧಾರ ಒದಗಿಸುವಂತೆ ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಆ.16ಕ್ಕೆ ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


