ಭೂಗತ ಪಾತಕಿ ಚೋಟಾ ರಾಜನ್ ಸಹಚರ ವಿನೀಶ್ ಶೆಟ್ಟಿ ಬಂಧನ!
ಜೋಡಿ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಿದ್ದ ಭೂಗತ ಪಾತಕಿ ಚೋಟಾ ರಾಜನ್ ಸಹಚರ ವಿನೀಶ್ ಶೆಟ್ಟಿಯನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಜೋಡಿ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಿದ್ದ ಭೂಗತ ಪಾತಕಿ ಚೋಟಾ ರಾಜನ್ ಸಹಚರ ವಿನೀಶ್ ಶೆಟ್ಟಿಯನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಂಡು ವಿಚಾರಣೆಗೆ ಹಾಜರಾಗದೆ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ, ಚೋಟಾ ರಾಜನ್ ಸಹಚರ ವಿನೀಶ್ ಶೆಟ್ಟಿಯನ್ನು ಕೊಣಾಜೆ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ವಿನೀಶ್ ಶೆಟ್ಟಿಯನ್ನು ಮುಂಬೈ ಪೊಲೀಸರಿಂದ ಕೋಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂಲತಃ ಉಡುಪಿಯ ಶಿರ್ವ ನಿವಾಸಿಯಾಗಿರುವ ವಿನೇಶ್ ಶೆಟ್ಟಿ (44 ವರ್ಷ) ವಿರುದ್ಧ ಜೋಡಿ ಕೊಲೆ ಮಾಡಿದ ಆರೋಪವಿತ್ತು. 2003 ರಲ್ಲಿ ಕಪ್ಪು ಕಲ್ಲು ಕೋರೆ ಮಾಲೀಕ ವೇಣು ಗೋಪಾಲ ನಾಯಕ್ ಮತ್ತು ಅವರ ಚಾಲಕ ಸಂತೋಷ್ ಎಂಬವರನ್ನು ಮುಡಿಪು ಇರಾ ಕ್ರಾಸ್ ಸಮೀಪ ಕೊಲೆಗೈಯ್ಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇದರಲ್ಲಿ ಜಾಮೀನು ಪಡೆದಿದ್ದ ಆರೋಪಿ ವಿನೀಶ್ ಶೆಟ್ಟಿ 2015 ರವರೆಗೂ ವಿಚಾರಣೆಗೆ ಹಾಜರಾಗಿದ್ದು, ಬಳಿಕ ವಿನೇಶ್ ತಲೆಮರೆಸಿಕೊಂಡಿದ್ದ. ಹೀಗಾಗಿ ವಿನೀಶ್ ಶೆಟ್ಟಿ ವಿರುದ್ಧ ವಾರಂಟ್ ಜಾರಿಯಾಗಿತ್ತು. ವಿನೇಶ್ ವಿರುದ್ಧ ಮುಂಬೈ, ದಾವಣೆಗೆರೆ, ಪುಣೆ, ಹೈದರಬಾದ್, ಮಂಗಳೂರಿನಲ್ಲಿ ಕೊಲೆ, ಅಕ್ರಮ ಶಸ್ತ್ರಾಸ್ತ್ರ, ಕೊಲೆಯತ್ನ ಸಹಿತ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


