ದೇಶ

ನಕಲಿ ರೇಪ್ ಕೇಸ್: ಉ.ಪ್ರ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜಾಮೀನು

ನಕಲಿ ಅತ್ಯಾಚಾರ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಮತ್ತು ಅವರ ಪತ್ನಿ ಮೇಲೆ ಆರೋಪ ಮಾಡಿದ...

ನಕಲಿ ರೇಪ್ ಕೇಸ್: ಉ.ಪ್ರ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜಾಮೀನು
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಜೊತೆ ಗಾಯತ್ರಿ ಪ್ರಜಾಪತಿ
Published On :
ಲಕ್ನೊ: ನಕಲಿ ಅತ್ಯಾಚಾರ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಮತ್ತು ಅವರ ಪತ್ನಿ ಮೇಲೆ ಆರೋಪ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಮಾಜಿ ಸಚಿವ ಗಾಯಿತ್ರಿ ಪ್ರಸಾದ್ ಪ್ರಜಾಪತಿ ಅವರಿಗೆ ಲಕ್ನೌದ ನ್ಯಾಯಾಲಯಜಾಮೀನು ಮಂಜೂರು ಮಾಡಿದೆ. 
ನಿನ್ನೆ ಜಾಮೀನು ನೀಡಿದ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ತಲಾ 20 ಸಾವಿರ ಶೂರಿಟಿ ಹಾಗೂ ಅಷ್ಟೇ ಮೊತ್ತದ ವೈಯಕ್ತಿಕ ಬಾಂಡ್ ನೀಡುವಂತೆ ಆದೇಶಿಸಿದ್ದಾರೆ. ಆದರೂ ಕೂಡ ಇನ್ನೊಂದು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ಗಾಯಿತ್ರಿ ಪ್ರಜಾಪತಿ ಜೈಲಿನಲ್ಲಿಯೇ ಉಳಿಯಬೇಕಾಗಿದೆ.
ಈ ಪ್ರಕರಣದಲ್ಲಿ ಹೈಕೋರ್ಟ್ ಅವರಿಗೆ ಜಾಮೀನು ತಿರಸ್ಕರಿಸಿತ್ತು. ಈ ಕುರಿತು ಮೇಲಿನ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.