ದೇಶ

ಜಮ್ಮು-ಕಾಶ್ಮೀರ; ಸಿಆರ್'ಪಿಎಫ್ ಪಡೆ ಮೇಲೆ ಉಗ್ರ ದಾಳಿ, ಓರ್ವ ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರ ನೌಗಾಮ್ ನಲ್ಲಿ ಸಿಆರ್'ಪಿಎಫ್ ಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಯೋಧನಿಗೆ ಗಾಯವಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ...

ಜಮ್ಮು-ಕಾಶ್ಮೀರ; ಸಿಆರ್'ಪಿಎಫ್ ಪಡೆ ಮೇಲೆ ಉಗ್ರ ದಾಳಿ, ಓರ್ವ ಯೋಧನಿಗೆ ಗಾಯ
ಸಂಗ್ರಹ ಚಿತ್ರ
Published On :

ನೌಗಾಮ್: ಜಮ್ಮು ಮತ್ತು ಕಾಶ್ಮೀರ ನೌಗಾಮ್ ನಲ್ಲಿ ಸಿಆರ್'ಪಿಎಫ್ ಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಯೋಧನಿಗೆ ಗಾಯವಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. 

ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಹಿನ್ನಲೆಯಲ್ಲಿ ಸಿಆರ್ ಪಿಎಫ್ ಯೋಧರು ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭದ್ರತೆಯನ್ನು ನೀಡುತ್ತಿದ್ದರು. ರಾತ್ರಿ 8.45ರ ಸುಮಾರಿಗೆ ಯೋಧರು ಸೇನಾ ಶಿಬಿರಗಳಿಗೆ ಹಿಂತಿರುಗುತ್ತಿದ್ದರು. ಈ ವೇಳೆ ಎರಡು ದ್ವಿಚಕ್ರ ವಾಹನದಲ್ಲಿ ಬಂದಿರುವ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. 

ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದ ಹಿನ್ನಲೆಯಲ್ಲಿ ನಾಗರೀಕರಿಗೆ ಯಾವುದೇ ಸಮಸ್ಯೆಗಳಾಗಬಾರದೆಂಬ ಕಾರಣಕ್ಕೆ ಯೋಧರು ಗಾಳಿಯಲ್ಲಿ ಗುಂಡು ಹಾರಿಸಿ ಸ್ಥಳದಿಂದ ಜನರು ಚದುರುವಂತೆ ಮಾಡಿದ್ದರು ಎಂದು ಸಿಆರ್'ಪಿಎಫ್'ನ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಜೇಶ್ ಯಾದವ್ ಅವರು ಹೇಳಿದ್ದಾರೆ. 

ದಾಳಿ ನಡೆಸಿದ ಬಳಿಕ ಉಗ್ರರು ಪರಾರಿಯಾದ ಹಿನ್ನಲೆಯಲ್ಲಿ ಉಗ್ರರನ್ನು ಸದೆಬಡಿಯಲು ಸೇನಾಪಡೆ ಭಾರೀ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.