ದೇಶ

ಉಗ್ರರಿಗೆ ನೆರವು ಪ್ರಕರಣ: ಬಂಧಿತ ಅಸ್ಲಾಂ ವನಿ ಆ.14ರವರೆಗೆ ಇಡಿ ವಶಕ್ಕೆ

ಪಾಕಿಸ್ತಾನ ಮೂಲದ ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದ ಮೇರೆಗೆ ಭಾನುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೀಡಾಗಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಶಬೀರ್‌ ಶಾ ಆಪ್ತ ಅಸ್ಲಾಂ ವನಿಯನ್ನು ನ್ಯಾಯಾಲಯ ಆ.14ರವರೆಗೆ ಇಡಿ ವಶಕ್ಕೆ ನೀಡಿದೆ.

ಉಗ್ರರಿಗೆ ನೆರವು ಪ್ರಕರಣ: ಬಂಧಿತ ಅಸ್ಲಾಂ ವನಿ ಆ.14ರವರೆಗೆ ಇಡಿ ವಶಕ್ಕೆ
ಪ್ರತ್ಯೇಕತಾವಾದಿ ಶಬ್ಬೀರ್ ಶಾ (ಸಂಗ್ರಹ ಚಿತ್ರ)
Published On :

ನವದೆಹಲಿ: ಪಾಕಿಸ್ತಾನ ಮೂಲದ ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದ ಮೇರೆಗೆ ಭಾನುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೀಡಾಗಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ  ಶಬೀರ್‌ ಶಾ ಆಪ್ತ ಅಸ್ಲಾಂ ವನಿಯನ್ನು ನ್ಯಾಯಾಲಯ ಆ.14ರವರೆಗೆ ಇಡಿ ವಶಕ್ಕೆ ನೀಡಿದೆ.

ಇಂದು ಬೆಳಗ್ಗೆ ಕಾಶ್ಮೀರದಲ್ಲಿ ಬಂಧಿತನಾಗಿದ್ದ ವನಿಯನ್ನು ಇಂದು ಸಂಜೆ ವೇಳೆಗೆ ದೆಹಲಿಗೆ ಕರೆತರಲಾಗಿತ್ತು. ಬಳಿಕ ಆತನನ್ನು ನ್ಯಾಯಾಲಯದ ಮುಂದೆ ಅಧಿಕಾರಿಗಳು ಹಾಜರು ಪಡಿಸಿದ್ದರು. ಇದೀಗ ಆರೋಪಿ ವನಿಯನ್ನು  ನ್ಯಾಯಾಲಯ ಹೆಚ್ಚಿನ ವಿಚಾರಣೆಗೆಗಾಗಿ ಆಗಸ್ಟ್ 14ರವರೆಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಶಕ್ಕೆ ನೀಡಿದೆ.

ಉಗ್ರರಿಗೆ ಆರ್ಥಿಕ ನೆರವು ನೀಡಿದ ಆರೋಪ ಮತ್ತು ದಶಕಗಳ ಹಿಂದಿನ ಹವಾಲಾ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಖಚಿತ ಸಾಕ್ಷ್ಯಾಧಾರಗಳು ದೊರೆತ ಹಿನ್ನಲೆಯಲ್ಲಿ ವನಿಯನ್ನು ಬಂಧಿಸಲಾಗಿತ್ತು. ಭಯೋತ್ಪಾದಕರಿಗೆ ಹಣಕಾಸು  ನೆರವು ನೀಡುವ ಜಾಲದ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಈ ಜಾಲದಲ್ಲಿ ವನಿ ಪಾತ್ರವಿರುವ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ. ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವ ಜಾಲದಲ್ಲಿ  ಸಕ್ರಿಯವಾಗಿರುವ ಆರೋಪದ ಮೇಲೆ ಜುಲೈ 25ರಂದು ಶಬೀರ್ ಶಾ ಅವರನ್ನು ಬಂಧಿಸಲಾಗಿತ್ತು. ಶಬೀರ್‌ ಅವರಿಗೆ ರು. 2.25 ಕೋಟಿ ಹಣ ನೀಡಿದ್ದಾಗಿ ವನಿ ಈ ಹಿಂದೆ ಬಂಧನಕ್ಕೊಳಗಾಗಿದ್ದ ವೇಳೆ ತಪ್ಪೊಪ್ಪಿಕೊಂಡಿದ್ದರು ಎಂದು  ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.