ದೇಶ

ಗುಜರಾತ್ ರಾಜ್ಯಸಭೆ ಚುನಾವಣೆ; ನನ್ನದು ರಹಸ್ಯ ಮತ: ಗುಟ್ಟು ಬಿಟ್ಟುಕೊಡದ ವಘೇಲಾ

ಭಾರಿ ಕುತೂಹಲ ಕೆರಳಿಸಿರುವ ಗುಜರಾತ್ ರಾಜ್ಯಸಭೆ ಚುನಾವಣೆಯ ಗುಟ್ಟು ಬಿಟ್ಟುಕೊಡದ ಮಾಜಿ ಹಿರಿಯ ಕಾಂಗ್ರೆಸ್ ನಾಯಕ ಶಂಕರ್....

ಗುಜರಾತ್ ರಾಜ್ಯಸಭೆ ಚುನಾವಣೆ; ನನ್ನದು ರಹಸ್ಯ ಮತ: ಗುಟ್ಟು ಬಿಟ್ಟುಕೊಡದ ವಘೇಲಾ
ಶಂಕರ್ ಸಿಂಗ್ ವಘೇಲಾ
Published On :
ಗಾಂಧಿನಗರ: ಭಾರಿ ಕುತೂಹಲ ಕೆರಳಿಸಿರುವ ಗುಜರಾತ್ ರಾಜ್ಯಸಭೆ ಚುನಾವಣೆಯ ಗುಟ್ಟು ಬಿಟ್ಟುಕೊಡದ ಮಾಜಿ ಹಿರಿಯ ಕಾಂಗ್ರೆಸ್ ನಾಯಕ ಶಂಕರ್ ಸಿಂಗ್ ವಘೇಲಾ ಅವರು ತಮ್ಮದು ರಹಸ್ಯ ಮತ ಎಂದು ಸೋಮವಾರ ಹೇಳಿದ್ದಾರೆ.
ನಾಳೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮ ಒಲವು ಯಾವ ಅಭ್ಯರ್ಥಿ ಕಡೆ ಎಂಬ ಬಗ್ಗೆ ಮಾಧ್ಯಮ ಪ್ರತಿಕ್ರಿಯಿಸಿರುವ ವಘೇಲಾ ಅವರು, ತಮ್ಮದು ರಹಸ್ಯ ಮತ ಎಂದು ಘೋಷಿಸಿದ್ದಾರೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ಪಟೇಲ್ ತಮ್ಮ ಈಗಲೂ ತಮ್ಮ ಸ್ನೇಹಿತ ಎಂದು ಹೇಳಿದ್ದಾರೆ.
ನಾನು ಕಾಂಗ್ರೆಸ್ ನೊಂದಿಗೆ ಯಾವುದೇ ಸಂಪರ್ಕ ಇಟ್ಟುಕೊಂಡಿಲ್ಲ ಎಂದಿರುವ ಗುಜರಾತ್ ಮಾಜಿ ಮುಖ್ಯಮಂತ್ರಿ ವಘೇಲಾ, ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ
ಇತರೆ ಕಾಂಗ್ರೆಸ್‌ ಶಾಸಕರಂತೆ ನನಗೂ ಕಾಂಗ್ರೆಸ್‌ನಿಂದ ವಿಪ್‌ ಜಾರಿಯಾಗಿದೆ. ವಿಪ್‌ ಜಾರಿಯಾದರೂ ಯಾರಿಗೆ ಮತ ನೀಡಬೇಕೆಂಬ ಸ್ವಾತಂತ್ರ್ಯ ಶಾಸಕರಿಗೆ ಇರುತ್ತದೆ ಎಂದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹಮ್ಮದ್ ಪಟೇಲ್ ಅವರಿಗೆ ಈ ಚುನಾವಣೆ ಪ್ರತಿಷ್ಠೆ ಪ್ರಶ್ನೆಯಾಗಿದ್ದು, ನನ್ನ ಗೆಲುವು ಖಚಿತ ಎಂದು ಪಟೇಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.