ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶಅಮೀರ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾ ಪಡೆ ಎನ್ ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಸಂಘಟನೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ...

Published On :
ಪುಲ್ವಾಮ: ಜಮ್ಮು ಮತ್ತು ಕಾಶಅಮೀರ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾ ಪಡೆ ಎನ್ ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಸಂಘಟನೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ.
ಪುಲ್ವಾಮ ಜಿಲ್ಲೆಯ ಸಂಬೂರಾ ಪ್ರದೇಶದಲ್ಲಿ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಮರ್ ಎಂಬ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
ಹತ್ಯೆಯಾಗಿರುವ ಉಗ್ರ ಉಮರ್ ಅಬು ಇಸ್ಮಾಯಿಲ್ ಸಂಘಟನೆಯೊಂದಿಗೆ ಸೇರಿಕೊಂಡು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಇಂದು ಬೆಳಿಗ್ಗೆ ಪುಲ್ವಾಮ ಜಿಲ್ಲೆಯ ಸಂಬೂರಾ ಪ್ರದೇಶದಲ್ಲಿ ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ 50 ಆರ್'ಆರ್ ಹಾಗೂ ಸಿಆರ್ ಪಿಎಫ್ ಯೋಧರು ಕಾರ್ಯಾಚರಣೆಗಿಳಿದಿದ್ದರು.
ಕಾರ್ಯಾಚರಣೆ ವೇಳೆ ಉಗ್ರ ಹಾಗೂ ಸೇನಾ ಪಡೆಗಳ ನಡುವೆ ಭಾರಿ ಗುಂಡಿನ ಚಕಮಕಿಗಳು ನಡೆದಿದ್ದವು. ಕಾರ್ಯಾಚರಣೆಗೆ ಯಾವುದೇ ಸಮಸ್ಯೆಗಳು ಎದುರಾಗಬಾರದು ಹಾಗೂ ವದಂತಿಗಳು ಹರಡಬಾರದೆಂಬ ಕಾರಣಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡಲು ಪುಲ್ವಾಮ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದರಂತೆ ಉಗ್ರನ ದಾಳಿಗೆ ದಿಟ್ಟ ಉತ್ತರ ನೀಡವ ಮೂಲಕ ಸೇನಾ ಪಡೆ ಕೊನೆಗೂ ಉಗ್ರನನ್ನು ಹತ್ಯೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


