ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಕತ್ತರಿ!
ಕೇಂದ್ರದ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯಕ್ಕೆ ನೀಡಲಾಗಿರುವ ಅಲ್ಪಸಂಖ್ಯಾತ ಸ್ಥಾನಮಾನ ಶೀಘ್ರವೇ ಕಳಚಿ ಬೀಳಲಿದೆ.

Published On :
ನವದೆಹಲಿ: ಕೇಂದ್ರದ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯಕ್ಕೆ ನೀಡಲಾಗಿರುವ ಅಲ್ಪಸಂಖ್ಯಾತ ಸ್ಥಾನಮಾನ ಶೀಘ್ರವೇ ಕಳಚಿ ಬೀಳಲಿದೆ.
ಮಾನವ ಸಂಪನ್ಮೂಲ ಇಲಾಖೆ ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸಲಿದ್ದು, ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಕೇಂದ್ರ ಸರ್ಕಾರ ಸಂಸತ್ ಕಾಯ್ದೆಯ ಪ್ರಕಾರ ಸ್ಥಾಪಿಸಿದ್ದು, ಹಣಕಾಸಿನ ನೆರವನ್ನೂ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ವಿವಿಗೆ ನೀಡಲಾಗಿರುವ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ತಪ್ಪು ಎಂದು ಪ್ರಮಾಣ ಪತ್ರ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.
ಅಲ್ಪಸಂಖ್ಯಾತ ಶೈಕ್ಷಣಿಕ ಸಂಸ್ಥೆಗಳ ರಾಷ್ಟ್ರೀಯ ಆಯೋಗದ 2011ರ ಫೆ.22 ರಂದು ಹೊರಡಿಸಿರುವ ಆದೇಶಕ್ಕೆ ಮಾನವ ಸಂಪನ್ಮೂಲ ಇಲಾಖೆ ತನ್ನ ಬೆಂಬಲವನ್ನು ಹಿಂಪಡೆಯಲಿದ್ದು, ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಅಲ್ಪಸಂಖ್ಯಾತ ವಿಶ್ವವಿದ್ಯಾನಿಲಯವಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಕೆ ಮಾಡಲಿದೆ. ಸ್ಮೃತಿ ಇರಾನಿ ಮಾನವ ಸಂಪನ್ಮೂಲ ಇಲಾಖೆ ಸಚಿವೆಯಾಗಿದ್ದಾಗ ಸರ್ಕಾರ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಅಲ್ಪಸಂಖ್ಯಾತ ಸ್ಥಾನಮಾನ ಹಿಂಪಡೆಯಲು ಚಿಂತನೆ ನಡೆಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HRD Ministryಮಾನವ ಸಂಪನ್ಮೂಲ ಇಲಾಖೆJamia Millia Islamiareligious minority statusಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


