ದೇಶ ಸೇವೆಗೆ ಎದುರು ನೋಡುತ್ತಿದ್ದೇನೆ: ನೀತಿ ಆಯೋಗ ಉಪಾಧ್ಯಕ್ಷ ರಾಜೀವ್ ಕುಮಾರ್
ನೀತಿ ಆಯೋಗದ ನೂತನ ಉಪಾಧ್ಯಕ್ಷರಾಗಿ ದೇಶ ಸೇವೆಗೆ ಎದುರು ನೋಡುತ್ತಿರುವುದಾಗಿ ಖ್ಯಾತ ಅರ್ಥಶಾಸ್ತ್ರಜ್ಞ ರಾಜೀವ್ ಕುಮಾರ್ ಹೇಳಿದ್ದಾರೆ.

Published On :
ನವದೆಹಲಿ: ನೀತಿ ಆಯೋಗದ ನೂತನ ಉಪಾಧ್ಯಕ್ಷರಾಗಿ ದೇಶ ಸೇವೆಗೆ ಎದುರು ನೋಡುತ್ತಿರುವುದಾಗಿ ಖ್ಯಾತ ಅರ್ಥಶಾಸ್ತ್ರಜ್ಞ ರಾಜೀವ್ ಕುಮಾರ್ ಹೇಳಿದ್ದಾರೆ.
ಅರವಿಂದ್ ಪನಗಾರಿಯಾ ಅವರ ರಾಜೀನಾಮೆಯ ನಂತರ ನೀತಿ ಆಯೋಗ ಉಪಾಧ್ಯಕ್ಷ ಸ್ಥಾನಕ್ಕೆ ಅರ್ಥಶಾಸ್ತ್ರಜ್ಞ ರಾಜೀವ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ರಾಜೀವ್ ಕುಮಾರ್, ನೀತಿ ಆಯೋಗದ ಉಪಾಧ್ಯಕ್ಷರಾಗಿ ದೇಶ ಸೇವೆಗೆ ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.
ಅರ್ಥಶಾಸ್ತ್ರದಲ್ಲಿ ಡಿ.ಫಿಲ್ ಪದವಿ ಪಡೆದಿರುವ ರಾಜೀವ್ ಕುಮಾರ್ ಅವರು ಲಖನೌ ವಿವಿಯಿಂದ ಪಿಹೆಚ್ ಡಿ ಪದವಿಯನ್ನೂ ಪಡೆದಿದ್ದು, ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ನಲ್ಲಿ ಸೀನಿಯರ್ ಫೆಲೋ ಆಗಿದ್ದು, ಎಫ್ಐಸಿಸಿಐ ನಲ್ಲಿ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅಷ್ಟೇ ಅಲ್ಲದೇ 2006-2008 ರ ಅವಧಿಯಲ್ಲಿ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ಸದಸ್ಯರಾಗಿಯೂ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


