ಗುಜರಾತ್ ರಾಜ್ಯಸಭೆ ಅಡ್ಡ ಮತದಾನ: ಕೈ ಶಾಸಕರ ಮತ ರದ್ದತಿಗೆ ಕಾಂಗ್ರೆಸ್ ಪಟ್ಟು; ಮತ ಎಣಿಕೆ ವಿಳಂಬ
ಗುಜರಾತ್ ರಾಜ್ಯಸಭಾ ಚುನಾವಣೆ ಬಿಜೆಪಿ-ಕಾಂಗ್ರೆಸ್ ನಡುವಿನ ಪ್ರತಿಷ್ಠೆಯ ಕಣವಾಗಿದ್ದು, ಬಿಜೆಪಿ ಪರ ಇಬ್ಬರು ಕೈ ಶಾಸಕರು ಅಡ್ಡಮತದಾನ ಮಾಡಿದ್ದು, ಅಡ್ಡಮತದಾನ ಮಾಡಿರುವ ಶಾಸಕರ ಮತಗಳನ್ನು...

Published On :
ಅಹಮದಾಬಾದ್: ಗುಜರಾತ್ ರಾಜ್ಯಸಭಾ ಚುನಾವಣೆ ಬಿಜೆಪಿ-ಕಾಂಗ್ರೆಸ್ ನಡುವಿನ ಪ್ರತಿಷ್ಠೆಯ ಕಣವಾಗಿದ್ದು, ಬಿಜೆಪಿ ಪರ ಇಬ್ಬರು ಕೈ ಶಾಸಕರು ಅಡ್ಡಮತದಾನ ಮಾಡಿದ್ದು, ಅಡ್ಡಮತದಾನ ಮಾಡಿರುವ ಶಾಸಕರ ಮತಗಳನ್ನು ರದ್ದುಗೊಳಿಸುವಂತೆ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿದೆ.
ಕಾಂಗ್ರೆಸ್ ನ ಶಾಸಕರು ಅಡ್ಡ ಮತದಾನ ಮಾಡಿ, ಮತ ಪತ್ರಗಳನ್ನು ಚುನಾವಣೆಯ ಬಳಿಕ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗೆ ತೋರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಡ್ದಮತದಾನ ಮಾಡಿರುವ ಇಬ್ಬರು ಶಾಸಕರ ಮತಗಳನ್ನು ರದ್ದುಗೊಳಿಸಬೇಕೆಂದು ಪಟ್ಟು ಹಿಡಿದಿದೆ. ಆದರೆ ಕಾಂಗ್ರೆಸ್ ನ ಮನವಿಯನ್ನು ಚುನಾವಣಾ ಆಯೋಗ ತಿರಸ್ಕರಿಸಿದ್ದು, ಮತ ಎಣಿಕೆ ಪ್ರಕ್ರಿಯೆ ಪ್ರಾರಂಭ ವಿಳಂಬವಾಗಿದೆ.
ಇದೇ ವೇಳೆ ಕೊನೆ ಘಳಿಗೆಯಲ್ಲಿ ಕೈ ಕೊಟ್ಟ ಎನ್ ಸಿಪಿ ವಿರುದ್ಧವೂ ಸೋನಿಯಾ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದು, ಎನ್ ಸಿಪಿಯ ಓರ್ವ ಶಾಸಕ ಬಿಜೆಪಿ ಪರ ಮತ ಚಲಾಯಿಸಿರುವುದಕ್ಕೆ ಸೋನಿಯಾ ಗಾಂಧಿ ಶರದ್ ಪವಾರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿElection Commissionಅಹ್ಮದ್ ಪಟೇಲ್Gujarat RajyaSabha Pollಗುಜರಾತ್ ರಾಜ್ಯಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


