ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ, ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು...

Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ.
ಕೃಷ್ಣಾಘಾಟಿ ಸೆಕ್ಟರ್ ಬಳಿಯಿರುವ ಭಾರತೀಯ ಸೇನಾ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿತ್ತು. ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಸೇನಾಧಿಕಾರಿ ಹೇಳಿದ್ದಾರೆ.
ಗಡಿಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಯೋಧ ಪವನ್ ಸಿಂಗ್ ಸುಗ್ರಾ ಎಂಬುವವರಿಗೆ ಗಂಭೀರವಾದ ಗಾಯಗಳಾಗಿದ್ದವು. ಚಿಕಿತ್ಸೆ ಫಲಕಾರಿಯಾಗದೆ ಇದೀಗ ಹುತಾತ್ಮರಾಗಿದ್ದಾರೆಂದು ತಿಳಿಸಿದ್ದಾರೆ.
ಪವಲ್ ಸಿಂಗ್ ಅವರು ಉತ್ತರಾಖಾಂಡ್ ನ ಪಿಥೋರಾರ್ಗ್ ಜಿಲ್ಲೆಯ ಸುಗ್ರಿ ಗ್ರಾಮ ಮೂಲದವರಾಗಿದ್ದು, ಪ್ರಾಮಾಣಿಕ ಹಾಗೂ ದಿಟ್ಟ ಯೋಧರಾಗಿದ್ದರು. ಪವನ್ ಸಿಂಗ್ ಅವರ ತ್ಯಾಗವನ್ನು ದೇಶ ಎಂದಿಗೂ ನೆನೆಯುತ್ತದೆ ಎಂದು ಸೇನಾಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತPakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರCeasefire ViolationJammu and Kashmirಕದನ ವಿರಾಮ ಉಲ್ಲಂಘನೆPawan Singh Sugraಪವನ್ ಸಿಂಗ್ ಸುಗ್ರಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


