ಮೀಸಲಾತಿಗೆ ಆಗ್ರಹಿಸಿ ಮರಾಠಿಗರಿಂದ ಬೃಹತ್ ಪ್ರತಿಭಟನೆ, ಮುಂಬೈ ಸ್ತಬ್ಧ
ಮರಾಠಿಗರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಬುಧವಾರ ಮರಾಠ ಸಮುದಾಯದ ಲಕ್ಷಾಂತರ....

Published On :
ಮುಂಬೈ: ಮರಾಠಿಗರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಬುಧವಾರ ಮರಾಠ ಸಮುದಾಯದ ಲಕ್ಷಾಂತರ ಜನರು ಮುಂಬೈನ ಆಜಾದ್ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ವಾಣಿಜ್ಯ ನಗರಿ ಸಂಪೂರ್ಣ ಸ್ತಬ್ಧಗೊಂಡಿದೆ.
ಇಂದು ಬೆಳಗ್ಗೆ 11 ಗಂಟೆಗೆ ಮರಾಠ ಕ್ರಾಂತಿ ಮೋರ್ಚಾದ ನೇತೃತ್ವದಲ್ಲಿ ಬೈಕುಲಾದ ವೀರಮಾತಾ ಜೀಜಾಬಾಯಿ ಭೋಸ್ಲೆ ಉದ್ಯಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ, ರಾಣಿಬಾಗ್‌ನಿಂದ ಸಾಗಿ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ ಮಾರ್ಗವಾಗಿ ಆಜಾದ್ ಮೈದಾನ ತಲುಪಿದೆ.
ಈ ಬೃಹತ್ ಪ್ರತಿಭಟನಾ ಮೆರವಣಿಗೆಯಿಂದಾಗಿ ಮುಂಬೈನ ಜನ ಜೀವನ ಅಸ್ತವ್ಯಸ್ತವಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಿರಲೆಂದು ಮುಂಬೈನ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮೀಸಲಾತಿಗೆ ಒತ್ತಾಯಿಸಿ ಮರಾಠಿಗರು ಮೌನ ಪ್ರತಿಭಟನೆ ನಡೆಸುತ್ತಿದ್ದು, ಮುಂಬೈನಲ್ಲಿ ನಡೆಯುತ್ತಿರುವ ಅತ್ಯಂತ ಬೃಹತ್ ಪ್ರತಿಭಟನೆ ಇದಾಗಿದೆ ಎನ್ನಲಾಗುತ್ತಿದೆ. ಇದುವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 57 ಮೋರ್ಚಾಗಳು ನಡೆದಿದ್ದು 58ನೇ ಬೃಹತ್ ಮೋರ್ಚಾ ಮುಂಬಯಿಯಲ್ಲಿ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


