ಭಾರತ ಸಹಿಷ್ಣು ದೇಶ, ಜನರು ಅಲ್ಪಸಂಖ್ಯಾತರ ಸಮಸ್ಯೆಗಳನ್ನು ರಾಜಕೀಯಗೊಳಿಸುತ್ತಾರೆ: ವೆಂಕಯ್ಯ ನಾಯ್ಡು
ರಾಜಕೀಯದ ಅಜೆಂಡಾ ಅಭಿವೃದ್ಧಿಯಾಗಿದೆ. ಭಾರತ ವಿಶ್ವದಲ್ಲಿಯೇ ಅತ್ಯಂತ ಸಹಿಷ್ಣು ದೇಶ. ಪರಸ್ಪರ ಗೌರವಿಸುವುದು ಭಾರತೀಯರ ಧಾರ್ಮಿಕತೆಯಾಗಿದೆ...

Published On :
ನವದೆಹಲಿ: ರಾಜಕೀಯದ ಅಜೆಂಡಾ ಅಭಿವೃದ್ಧಿಯಾಗಿದೆ. ಭಾರತ ವಿಶ್ವದಲ್ಲಿಯೇ ಅತ್ಯಂತ ಸಹಿಷ್ಣು ದೇಶ. ಪರಸ್ಪರ ಗೌರವಿಸುವುದು ಭಾರತೀಯರ ಧಾರ್ಮಿಕತೆಯಾಗಿದೆ. ರಾಜಕೀಯ ಉದ್ದೇಶಕ್ಕಾಗಿ ಜನರು ಅಲ್ಪಸಂಖ್ಯಾತ ಸಮಸ್ಯೆಗಳನ್ನು ಬಳಸಲು ಪ್ರಯತ್ನಿಸುತ್ತಾರೆ ಎಂದು ಉಪ ರಾಷ್ಟ್ರಪತಿಯಾಗಿ ಆಯ್ಕೆಗೊಂಡಿರುವ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.
ದುರದೃಷ್ಣವಶಾತ್ ಕೆಲವರು ಅಲ್ಪಸಂಖ್ಯಾತ ವಿಷಯವನ್ನು ದುರುದ್ದೇಶಪೂರ್ವಕವಾಗಿ ಬಳಸಿಕೊಂಡು ರಾಷ್ಟ್ರಮಟ್ಟದಲ್ಲಿ ಅದನ್ನು ತೆಗೆದುಕೊಂಡು ಹೋಗುವ ಮೂಲಕ ಅಪಪ್ರಚಾರವೆಸಗಲು ಪ್ರಯತ್ನಿಸುತ್ತಾರೆ ಎಂದರು.
ದೇಶದಲ್ಲಿ ಮುಸಲ್ಮಾನರಿಗೆ ಅಭದ್ರತೆ ಕಾಡುತ್ತಿದೆ. ಅವರಿಗೆ ಬದುಕಲು ಕಷ್ಟವಾಗುತ್ತಿದೆ ಎಂದು ನಿರ್ಗಮಿತ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಹೇಳಿದ್ದರ ಹಿನ್ನೆಲೆಯಲ್ಲಿ ವೆಂಕಯ್ಯ ನಾಯ್ಡು ಹೀಗೆ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


