ಮಾಲಿನ್ಯ ಪ್ರಮಾಣಪತ್ರ ಇಲ್ಲದೆ ವಾಹನಗಳ ವಿಮೆ ನವೀಕರಣಕ್ಕೆ ಇಲ್ಲ: ಸುಪ್ರೀಂ ಕೋರ್ಟ್
ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಸುಪ್ರೀಂ ಕೋರ್ಟ್, ಪರಿಸರ ಮಾಲಿನ್ಯ ಪ್ರಮಾಣ....

Published On :
ನವದೆಹಲಿ: ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಸುಪ್ರೀಂ ಕೋರ್ಟ್, ಪರಿಸರ ಮಾಲಿನ್ಯ ಪ್ರಮಾಣ ಪತ್ರ(ಪಿಯುಸಿ) ಇಲ್ಲದೆ ವಾಹನಗಳ ವಿಮೆಯನ್ನು ನವೀಕರಣಗೊಳಿಸದಂತೆ ವಿಮಾ ಕಂಪನಿಗಳಿಗೆ ಗುರುವಾರ ಆದೇಶಿಸಿದೆ.
ಪರಿಸರವಾದಿ ಎಂ.ಸಿ ಮೇಹ್ತಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಬಿ ಲೋಕುರ್ ನೇತೃತ್ವದ ಸುಪ್ರೀಂ ಪೀಠ, ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲೂ ಪಿಯುಸಿ ಕೇಂದ್ರಗಳನ್ನು ಸ್ಥಾಪಿಸುವಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಸೂಚಿಸಿದೆ. ಅಲ್ಲದೆ ಇದಕ್ಕಾಗಿ ನಾಲ್ಕು ವಾರಗಳ ಕಾಲವಕಾಶ ನೀಡಿದೆ.
ಇನ್ನು ದೆಹಲಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಿದರೆ 5 ಸಾವಿರ ರು. ದಂಡ, ವಾಹನಗಳ ವಿಮೆಯನ್ನು ನವೀಕರಣ ಮಾಡುವ ಸಂದರ್ಭದಲ್ಲಿ ಮಾಲಿನ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕೆಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾಗಿ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


