ದೇಶ

ದೆಹಲಿಯಲ್ಲಿ ಅಲ್ ಖೈದ ಸಂಘಟನೆಗೆ ಸೇರಿದ ಶಂಕಿತ ಉಗ್ರನ ಬಂಧನ!

ಮಹತ್ವದ ಕಾರ್ಯಾಚರಣೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಲ್ ಖೈದಾ ಉಗ್ರ ಸಂಘಟನೆಗೆ ಸೇರಿದ ಓರ್ವ ಶಂಕಿತ ಉಗ್ರನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿ ಅಲ್ ಖೈದ ಸಂಘಟನೆಗೆ ಸೇರಿದ ಶಂಕಿತ ಉಗ್ರನ ಬಂಧನ!
ಸಂಗ್ರಹ ಚಿತ್ರ
Published On :

ನವದೆಹಲಿ: ಮಹತ್ವದ ಕಾರ್ಯಾಚರಣೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಲ್ ಖೈದಾ ಉಗ್ರ ಸಂಘಟನೆಗೆ ಸೇರಿದ ಓರ್ವ ಶಂಕಿತ ಉಗ್ರನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಬಂಧಿತನನ್ನು ಬಾಂಗ್ಲಾದೇಶ ಮೂಲದ ರಾಜಾ ಉಲ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಈತ ಅಲ್ ಖೈದಾ ಉಗ್ರ ಸಂಘಟನೆ ಬಾಂಗ್ಲಾ ಘಟಕ ಅನ್ಸರ್ ಬಾಂಗ್ಲಾ ಉಗ್ರ ಸಂಘಟನೆಗೆ ಸೇರಿದವನೆಂದು  ಹೇಳಲಾಗಿದೆ. ಕಾರ್ಯಾಚರಣೆ ವೇಳೆ ಈತ ಭಾರತದಿಂದ ನೇಪಾಳಕ್ಕೆ ಅಲ್ಲಿಂದ ಬಾಂಗ್ಲಾಗೆ ತೆರಳು ಸಂಚು ರೂಪಿಸಿದ್ದ. ಆದರೆ ಅಷ್ಟರೊಳಗೇ ದೆಹಲಿಯಲ್ಲಿ ಈತನನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು  ತಿಳಿದುಬಂದಿದೆ.

ಪ್ರಸ್ತುತ ದೆಹಲಿ ಪೊಲೀಸರ ವಶದಲ್ಲಿರುವ ಬಂಧಿತನನ್ನು ಪಶ್ಚಿಮ ಬಂಗಾಳ ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಈತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

ನಕಲಿ ನೋಟು ಚಲಾವಣೆ, ಉಗ್ರ ಸಂಘಟನೆಗೆ ಸೇರುವಂತೆ ಯುವಕರನ್ನು ಪ್ರಚೋದಿಸುವುದು ಸೇರಿದಂತೆ ಈತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.