ಚಂಡೀಗಢ ಯುವತಿಗೆ ಕಿರುಕುಳ ಪ್ರಕರಣ: ಸಿಸಿಟಿವಿಯಿಂದ ಮತ್ತಷ್ಟು ಸಾಕ್ಷ್ಯಾಧಾರ ಲಭ್ಯ
ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ,...

Published On :
ಚಂಡೀಗಢ: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ಹಾಗೂ ಆತನ ಸ್ನೇಹಿತ ಆಶೀಶ್ ಬರಲಾ ವಿರುದ್ಧ ಮತ್ತಷ್ಟು ಸಾಕ್ಷಿಗಳು ಲಭ್ಯವಾಗಿವೆ.
ಮಧ್ಯರಾತ್ರಿಯಲ್ಲಿ ಬರಾಲಾ ಮತ್ತು ಆತ್ನ ಸ್ನೇಹಿತ ಆಶೀಶ್ ಕುಮಾರ್, ಅಂಗಡಿಯೊಂದರಿಂದ ಆಲ್ಕೋಹಾಲ್ ಖರೀದಿಸುತ್ತಿರುವ ದೃಶ್ಯಗಳು ಚಂಡಿಗಡ ಸೆಕ್ಟರ್ 9 ರಲ್ಲಿರುವ ಸಿಸಿಟಿವಿಯಲ್ಲಿ ದಾಖಲಾಗಿವೆ. ಘಟನೆ ನಡೆದಾಗ ಇಬ್ಬರು ಆರೋಪಿಗಳು ಪಾನಮತ್ತರಾಗಿದ್ದರು ಎಂಬುದು ಸಾಬೀತಾಗಿದೆ.
ಆಗಸ್ಟ್ 5 ರಂದು ಚಂಡೀಗಢದ ಯುವತಿ ವರ್ನಿಕಾ ಕುಂದು ಅವರ ಕಾರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋರ್ಟ್ ವಿಕಾಸ್ ಬರಾಲಾ ಹಾಗೂ ಆಶೀಶ್ ನನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಿತ್ತು.
ಬಿಜೆಪಿ ನಾಯಕನ ಪುತ್ರ ಹಾಗೂ ಆತನ ಸ್ನೇಹಿತನ ವಿರುದ್ಧ ಐಪಿಸಿ ಸೆಕ್ಷೆನ್ 365 (ಅಪಹರಣ ಯತ್ನ) ಹಾಗೂ 511ರಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CCTV footageಸಿಸಿಟಿವಿ ದೃಶ್ಯಾವಳಿVikas Baralaವಿಕಾಸ್ ಬರಾಲಾChandigarh stalking caseಚಂಡೀಗಢ ಯುವತಿಗೆ ಕಿರುಕುಳ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


