ಧ್ವಜಾರೋಹಣ ಮಾಡದವರು, ರಾಷ್ಟ್ರಗೀತೆ ಹಾಡದವರು ದೇಶದ್ರೋಹಿಗಳು: ಕಟಿಯಾರ್
ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದಲ್ಲಿರುವ ಎಲ್ಲಾ ಮದರಸಾಗಳಲ್ಲೂ ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆಯನ್ನು ಹಾಡಬೇಕೆಂದು...

Published On :
ನವದೆಹಲಿ: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದಲ್ಲಿರುವ ಎಲ್ಲಾ ಮದರಸಾಗಳಲ್ಲೂ ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆಯನ್ನು ಹಾಡಬೇಕೆಂದು ಉತ್ತರಪ್ರದೇಶ ಸರ್ಕಾರ ಆದೇಶ ನೀಡಿದ್ದ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕ ವಿನಯ್ ಕಟಿಯಾರ್ ಅವರು ಇದನ್ನು ಪಾಲಿಸದ ಜನರನ್ನು ದೇಶದ್ರೋಹಿಗಳು ಎಂದು ಪರಿಗಣಿಸಬೇಕು ಎಂದು ಹೇಳಿದ್ದಾರೆ.
ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಕಟಿಯಾರ್, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶದ ನಡೆ ನಿಜಕ್ಕೂ ಸ್ವಾಗತಾರ್ಹ. ಯೋಗಿ ಅವರು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ. ಇದು ನಮ್ಮ ಹೆಮ್ಮೆ ಇದನ್ನು ನಾವು ಹಾರಿಸಬೇಕು. ಯಾವುದೇ ಶಾಲೆ ಇರಲಿ ಮದರಾಸ ಇರಲಿ ಅಥವಾ ಯಾವುದೇ ಇತರ ಸಂಘಟನೆಗಳೆ ಆಗಲಿ ನಾವು ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜವನ್ನು ಹಾರಿಸಬೇಕು. ಇದನ್ನು ಒಪ್ಪದವರನ್ನು ದೇಶದ್ರೋಹಿಗಳೆಂದು ಪರಿಗಣಿಸಬೇಕಿದೆ ಎಂದರು.
ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ, ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಎಲ್ಲಾ ಮದರಾಸಗಳಲ್ಲಿ ಧ್ವಜಾರೋಹಣ, ರಾಷ್ಟ್ರಗೀತೆ ಹಾಡುವಂತೆ ಹಾಗೂ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವಂತೆ ಸೂಚಿಸಿದೆ. ಅಲ್ಲದೆ ಬೆಳಗ್ಗೆ 8 ಗಂಟೆಯೊಳಗೆ ಧ್ವಜಾರೋಹಣ ಮಾಡಬೇಕು. ಜತೆಗೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳ ಫೋಟೋ ಹಾಗೂ ವಿಡಿಯೋಗಳನ್ನು ಮಾಡುವಂತೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರಪ್ರದೇಶರಾಷ್ಟ್ರಧ್ವಜnational anthemರಾಷ್ಟ್ರಗೀತೆಯೋಗಿ ಆದಿತ್ಯನಾಥ್Independence DayMadarasaಮದರಸಾNational Flagಸ್ವಾತಂತ್ರ್ಯೋತ್ಸವ ದಿನYogi Addityanath
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


