ದೇಶ

ಮೋಸ್ಟ್ ವಾಂಟೆಡ್ ಉಗ್ರರ ಪೋಸ್ಟರ್ಸ್ ಬಿಡುಗಡೆ ಮಾಡಿದ ದೆಹಲಿ ಪೊಲೀಸ್!

ತಲೆಮರೆಸಿಕೊಂಡು ಭಾರತದ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ಮೋಸ್ಟ್ ವಾಂಟೆಡೆ ಉಗ್ರರ ಪೋಸ್ಟರ್ಸ್ ಗಳನ್ನು ದೆಹಲಿ ಪೊಲೀಸರು ಶನಿವಾರ ಬಿಡುಗಡೆ ಮಾಡಿದ್ದಾರೆ...

ಮೋಸ್ಟ್ ವಾಂಟೆಡ್ ಉಗ್ರರ ಪೋಸ್ಟರ್ಸ್ ಬಿಡುಗಡೆ ಮಾಡಿದ ದೆಹಲಿ ಪೊಲೀಸ್!
ಮೋಸ್ಟ್ ವಾಂಟೆಡ್ ಉಗ್ರರ ಪೋಸ್ಟರ್ಸ್ ಬಿಡುಗಡೆ ಮಾಡಿದ ದೆಹಲಿ ಪೊಲೀಸ್!
Published On :
ನವದೆಹಲಿ: ತಲೆಮರೆಸಿಕೊಂಡು ಭಾರತದ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ಮೋಸ್ಟ್ ವಾಂಟೆಡೆ ಉಗ್ರರ ಪೋಸ್ಟರ್ಸ್ ಗಳನ್ನು ದೆಹಲಿ ಪೊಲೀಸರು ಶನಿವಾರ ಬಿಡುಗಡೆ ಮಾಡಿದ್ದಾರೆ. 
ದೆಹಲಿಯ ವಿಶೇಷ ಕಾರಾಗೃಹದ ಪೊಲೀಸರು ಉಗ್ರರ ಭಾವಿಚಿತ್ರವಿರುವ ಪೋಸ್ಟರ್ಸ್ ಗಳನ್ನು ಬಿಡುಗಡೆ ಮಾಡಿದ್ದು, ಪೋಸ್ಟರ್ ನಲ್ಲಿ ಲಷ್ಕರ್-ಇ-ತೊಯ್ಬಾ, ಇಂಡಿಯನ್ ಮುಜಾಹಿದ್ದೀನ್ ಮತ್ತು ಬಬ್ಬರ್ ಖಾಲ್ಸಾ ಅಂತರಾಷ್ಟ್ರೀಯ ಉಗ್ರರ ಸಂಘಟನೆಗೆ ಸೇರಿದ ಉಗ್ರರ ಫೋಟೋಗಳಿವೆ ಎಂದು ತಿಳಿದುಬಂದಿದೆ. 
ಆಗಸ್ಟ್.15 ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಇನ್ನು 3 ದಿನಗಳಷ್ಟೇ ಬಾಕಿಯಿದ್ದು, ಭಾರತದ ಮೇಲೆ ದಾಳಿ ನಡೆಸಲು ಈಗಾಗಲೇ ಉಗ್ರ ಸಂಘಟನೆಗಳು ಷಡ್ಯಂತ್ರಗಳನ್ನು ರೂಪಿಸುತ್ತಿವೆ. ಈ ಹಿನ್ನಲೆಯಲ್ಲಿ ರಾಜಧಾನಿ ನವದೆಹಲಿ ಸೇರಿದಂತೆ ದೇಶದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.