ಎನ್'ಡಿಎ ಸೇರುವಂತೆ ಸಿಎಂ ನಿತೀಶ್'ಗೆ ಅಮಿತ್ ಶಾ ಅಧಿಕೃತ ಆಹ್ವಾನ
ಕೇಂದ್ರದ ಆಡಳಿತಾರೂಢ ಎನ್'ಡಿಎ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಪಕ್ಷದ ಅಧ್ಯಕ್ಷ ನಿತೀಶ್ ಕುಮಾರ್ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ...

Published On :
ನವದೆಹಲಿ; ಕೇಂದ್ರದ ಆಡಳಿತಾರೂಢ ಎನ್'ಡಿಎ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಪಕ್ಷದ ಅಧ್ಯಕ್ಷ ನಿತೀಶ್ ಕುಮಾರ್ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಅಧಿಕೃತ ಆಹ್ವಾನ ನೀಡಿದ್ದಾರೆ.
ನಿತೀಶ್ ಕುಮಾರ್ ಅವರಿಗೆ ಆಹ್ವಾನ ನೀಡಿರುವ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅಮಿತ್ ಶಾ ಅವರು, ನಿನ್ನೆಯಷ್ಟೇ ಸ್ವಗೃಹದಲ್ಲಿ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೆ. ಮಾತುಕತೆ ವೇಳೆ ಎನ್ ಡಿಎ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಆಹ್ವಾನ ನೀಡಿದ್ದೇನೆಂದು ಹೇಳಿಕೊಂಡಿದ್ದಾರೆ.
ಅಮಿತ್ ಶಾ ಅವರು ಅಧಿಕೃತವಾಗಿ ಆಹ್ವಾನ ನೀಡಿರುವ ಹಿನ್ನಲೆಯಲ್ಲಿ, ಬಿಹಾರ ರಾಜ್ಯದಲ್ಲಿನ ಮಹಾಮೈತ್ರಿಯಿಂದ ಹೊರ ಬಂದು ಬಿಜೆಪಿಯ ಬೆಂಬಲದೊಂದಿಗೆ ಹೊಸ ಮೈತ್ರಿಕೂಡ ಸರ್ಕಾರ ರಚನೆ ಮಾಡಿರುವ ನಿತೀಶ್ ಕುಮಾರ್ ಅವರು ಇದೀಗ ಎನ್ ಡಿಎ ಪಕ್ಷ ಸೇರುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ ಪಾಟ್ನದಲ್ಲಿ ಇದೇ ಆ.19 ರಂದು ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಎನ್ ಡಿಎ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಪ್ರಸ್ತಾವಕ್ಕೆ ಅನುಮೋದನೆ ನೀಡಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಬಳಿಕ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಕೇಂದ್ರದಲ್ಲಿನ ನರೇಂದ್ರ ಮೋದಿಯವರ ಸಚಿವ ಸಂಪುಟವನ್ನು ಸೇರಲಿದೆ ಎಂದು ಹೇಳಲಾಗುತ್ತಿದೆ.
ಮೋದಿಯವರ ಸಂಪುಟಕ್ಕೆ ಜೆಡಿಯು ಸೇರ್ಪಡೆಗೊಳ್ಳಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಜೆಡಿಯು ನಾಯಕರೊಬ್ಬರು, ಈ ರೀತಿಯ ನಿರ್ಧಾರಗಳು ಸಾಮಾನ್ಯವಾದದ್ದು. ಬಿಹಾರದಲ್ಲಿ ಎರಡೂ ಪಕ್ಷಗಳು ಮೈತ್ರಿಗೊಂಡು ಸರ್ಕಾರ ನಡೆಸುತ್ತಿವೆ. ನಮ್ಮ ಪಕ್ಷ ಕೇಂದ್ರ ಸರ್ಕಾರದೊಂದಿಗೆ ಕೈಜೋಡಿಸುವುದು ಸಾಮಾನ್ಯವಾದದ್ದು ಎಂದಿದ್ದಾರೆ.
ಮಹಾ ಮೈತ್ರಿಕೂಟದ ಭ್ರಷ್ಟ ನಾಯಕರೊಂದಿಗೆ ತನ್ನನ್ನು ಗುರ್ತಿಸಿಕೊಳ್ಳಲು ನನಗೆ ಇಷ್ಟವಿಲ್ಲ. ಅವರೊಂದಿಗೆ ಸರ್ಕಾರ ಕೂಡಿಕೊಂಡು ಕೆಲಸ ಮಾಡುವುದು ಸಾಧ್ಯವಿಲ್ಲ ಎಂದ ಸಂದೇಶವನ್ನು ರವಾನಿಸಿದ್ದ ನಿತೀಶ್ ಕುಮಾರ್ ಅವರು ಅವರು ಕೆಲ ದಿನಗಳ ಹಿಂದಷ್ಟೇ ಹಠಾತ್ ಬೆಳವಣಿಗೆ ಎಂಬಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
ನಂತರ ಆರ್ ಜೆಡಿ ಸ್ನೇಹದಿಂದ ಹೊರ ಬಂದ ನಿತೀಶ್ ಕುಮಾರ್ ಅವರಿಗೆ ಬಿಜೆಪಿ ಬೆಂಬಲ ನೀಡಿತ್ತು. ಈ ಹಿನ್ನಲೆಯಲ್ಲಿ ಸರ್ಕಾರ ರಚನೆಗೆ ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ನಿತೀಶ್ ಕುಮಾರ್ ಅವರಿಗೆ ಆಹ್ವಾನ ನೀಡಿದ್ದರು. ಇದರಂತೆ ನಿತೀಶ್ ಕುಮಾರ್ ಅವರು ಬಿಹಾರ ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಅಧಿಕಾರ ಸ್ವೀಕಾರ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


