ಗೋರಕ್ ಪುರ ಆಸ್ಪತ್ರೆ ದುರಂತ: ನೈತಿಕ ಹೊಣೆ ಹೊತ್ತು ಸಚಿವರು ರಾಜಿನಾಮೆ ನೀಡಬೇಕು: ಗುಲಾಂ ನಬಿ ಆಜಾದ್
ಗೋರಕ್ ಪುರ ಬಿಆರ್ ಡಿ ಆಸ್ಪತ್ರೆಯಲ್ಲಿ ನಡೆದ ಮಕ್ಕಳ ಸಾವಿನ ಪ್ರಕರಣದ ನೈತಿಕ ಹೊಣೆ ಹೊತ್ತು ಉತ್ತರ ಪ್ರದೇಶದ ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ರಾಜಿನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

ಲಖನೌ: ಗೋರಕ್ ಪುರ ಬಿಆರ್ ಡಿ ಆಸ್ಪತ್ರೆಯಲ್ಲಿ ನಡೆದ ಮಕ್ಕಳ ಸಾವಿನ ಪ್ರಕರಣದ ನೈತಿಕ ಹೊಣೆ ಹೊತ್ತು ಉತ್ತರ ಪ್ರದೇಶದ ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ರಾಜಿನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಗೋರಕ್ ಪುರ ಆಸ್ಪತ್ರೆ ದುರಂತದ ಹಿನ್ನಲೆಯಲ್ಲಿ ಇಂದು ದೆಹಲಿಯಿಂದ ಆಗಮಿಸಿದ ಕಾಂಗ್ರೆಸ್ ನಿಯೋಗ ದುರಂತ ನಡೆದ ಬಿಆರ್ ಡಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿತು. ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್, ರಾಜ್ ಬಬ್ಬರ್ ನೇತೃತ್ವದ ನಿಯೋಗ ಆಸ್ಪತ್ರೆಗೆ ಭೇಟಿ ನೀಡಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗುಲಾಂ ನಬಿ ಆಜಾದ್ ಅವರು, ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಆರೋಗ್ಯ ಸಿಚವ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಪ್ರಕರಣದ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಅವರು ಹೇಳಿದರು.
ಅಂತೆಯೇ ಸಿಎಂ ಯೋಗಿ ಆದಿತ್ಯಾನಾಥ್ ಅವರ ಬಗ್ಗೆಯೂ ಮಾತನಾಡಿದ ಗುಲಾಂ ನಬಿ ಆಜಾದ್ ಅವರು, ಹತ್ತಾರು ಅಮಾಯಕ ಮಕ್ಕಳ ಸಾವಿಗೆ ಶರಣಾಗಿದ್ದು, ನಿಜಕ್ಕೂ ಇಂತಹ ಘಟನೆ ಮರುಕಳಿಸಬಾರದು. ದುರಂತಕ್ಕೆ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ಕಾರಣವಾಗಿದ್ದು, ಯೋಗಿ ಆದಿತ್ಯಾನಾಥ್ ಅವರು ಯಾವುದೇ ಕಾರಣಕ್ಕೂ ಜಬಾವ್ದಾರಿಯಿಂದ ನುಣಿಚಿಕೊಳ್ಳುವಂತಿಲ್ಲ. ಸಿಎಂ ತನಿಖೆಗೆ ಆದೇಶ ನೀಡಿದರೆ ಸಾಲದು. ತಪ್ಪಿತಸ್ಥರನ್ನು ಕಠಿಣವಾಗಿ ಶಿಕ್ಷಿಸಬೇಕು. ಅಂತಯೇ ಕೂಡಲೇ ಅವರು ಪ್ರಜೆಗಳ ಕ್ಷಮೆ ಕೇಳಬೇಕು ಎಂದು ಗುಲಾಂ ನಬಿ ಆಜಾದ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


