ವಿಪಕ್ಷಗಳಿಗೆ ದೊಡ್ಡ ಹಿನ್ನಡೆ: ಮಹತ್ವದ ಸಭೆಗೆ ಎನ್ ಸಿಪಿ ಗೈರು!
ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಅಹ್ಮದ್ ಪಟೆಲ್ ಅವರ ಗೆಲುವಿನೊಂದಿಗೆ, ಮಾನಸಿಕ ಸ್ಥೈರ್ಯ ಹೆಚ್ಚಿಸಿಕೊಂಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ಹಿನ್ನಡೆಯುಂಟಾಗಿದ್ದು, ಎನ್ ಸಿಪಿ ಪಕ್ಷ ವಿರೋಧಪಕ್ಷಗಳ ಮಹತ್ವದ

Published On :
ನವದೆಹಲಿ: ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಅಹ್ಮದ್ ಪಟೆಲ್ ಅವರ ಗೆಲುವಿನೊಂದಿಗೆ, ಮಾನಸಿಕ ಸ್ಥೈರ್ಯ ಹೆಚ್ಚಿಸಿಕೊಂಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ಹಿನ್ನಡೆಯುಂಟಾಗಿದ್ದು, ಎನ್ ಸಿಪಿ ಪಕ್ಷ ವಿರೋಧಪಕ್ಷಗಳ ಮಹತ್ವದ ಸಭೆಗೆ ಗೈರು ಹಾಜರಾಗಿದೆ.
ಬಿಜೆಪಿ ವಿರುದ್ಧ ಕಾರ್ಯತಂತ್ರ ರೂಪಿಸಲು ವಿರೋಧಪಕ್ಷಗಳು ಕರೆದಿದ್ದ ಸಭೆಯಿಂದ ಎನ್ ಸಿಪಿ ದೂರ ಉಳಿದಿದ್ದು, ಕಾಂಗ್ರೆಸ್ ಗೆ ಹಿನ್ನಡೆಯುಂಟಾಗಿದೆ. ಬಿಜೆಪಿ ವಿರುದ್ಧ ಕಾರ್ಯತಂತ್ರ ಹೆಣೆಯುವುದಕ್ಕೆ ಸೋನಿಯಾ ಗಾಂಧಿ ನೇತೃತ್ವ ವಹಿಸಬೇಕೆಂದು 16 ಪಕ್ಷಗಳ ನಾಯಕರು ಮನವಿ ಮಾಡಿದ್ದರು. ಆದರೆ ಎನ್ ಸಿಪಿ ಪಕ್ಷ ಕಾಂಗ್ರೆಸ್ ನೊಂದಿಗಿನ ಮೈತ್ರಿಯಿಂದ ದೂರ ಉಳಿಯಲು ಚಿಂತನೆ ನಡೆಸಿದ್ದು, ಕಾಂಗ್ರೆಸ್ ಗೆ ಹಿನ್ನಡೆಯುಂಟಾಗಿದೆ.
ಗುಜರಾತ್ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಎನ್ ಸಿಪಿ ಪಕ್ಷದ ಶಾಸಕರು ಬಿಜೆಪಿ ಪರ ಮತಚಲಾಯಿಸಿದ್ದರು, ಇದರಿಂದಾಗಿ ಕಾಂಗ್ರೆಸ್-ಎನ್ ಸಿಪಿ ನಡುವಿನ ಸಂಬಂಧ ಹದಗೆಟ್ಟಿದ್ದು, ಈಗ ವಿರೋಧ ಪಕ್ಷಗಳ ಸಭೆಗೂ ಇದರ ಪರಿಣಾಮ ಉಂಟಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


