ಗೋರಕ್'ಪುರ ಆಸ್ಪತ್ರೆ ದುರಂತ: ಮಿದುಳು ಜ್ವರಕ್ಕೆ ಮತ್ತೊಂದು ಮಗು ಬಲಿ, ಸಾವಿನ ಸಂಖ್ಯೆ 70ಕ್ಕೆ ಏರಿಕೆ
ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯುಂಟಾಗಿ ಶನಿವಾರಷ್ಟೇ 11 ಮಕ್ಕಳು ಸಾವನ್ನಪ್ಪಿದ್ದ ಸುದ್ದಿ ಬೆನ್ನಲ್ಲೇ, ಭಾನುವಾರ ಕೂಡ ಮತ್ತೊಂದು ಮಗು ಬಲಿಯಾಗಿದ್ದು, ಕಳೆದ ಆರು ದಿನಗಳಲ್ಲಿ ಗೋರಕ್'ಪುರ ಆಸ್ಪತ್ರೆಯಲ್ಲಿ ಒಟ್ಟು 70 ಮಕ್ಕಳು ಮೃತಪಟ್ಟಿರುವುದಾಗಿ...

Published On :
ಗೋರಕ್'ಪುರ: ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯುಂಟಾಗಿ ಶನಿವಾರಷ್ಟೇ 11 ಮಕ್ಕಳು ಸಾವನ್ನಪ್ಪಿದ್ದ ಸುದ್ದಿ ಬೆನ್ನಲ್ಲೇ, ಭಾನುವಾರ ಕೂಡ ಮತ್ತೊಂದು ಮಗು ಬಲಿಯಾಗಿದ್ದು, ಕಳೆದ ಆರು ದಿನಗಳಲ್ಲಿ ಗೋರಕ್'ಪುರ ಆಸ್ಪತ್ರೆಯಲ್ಲಿ ಒಟ್ಟು 70 ಮಕ್ಕಳು ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿವೆ.
ಗೋರಕ್ ಪುರ ಆಸ್ಪತ್ರೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೇಶದಾದ್ಯಂತ ಕಳವಳ ಹಾಗೂ ಸರ್ಕಾರಿ ವ್ಯವಸ್ಥೆಯ ವಿರುದ್ಧ ಆಕ್ರೋಶಗಳು ವ್ಯಕ್ತವಾಗತೊಡಗಿವೆ. ಈ ನಡುವೆ ಇಂದೂ ಕೂಡ ಸಾವಿನ ಮೃದಂಗ ಮುಂದುವರೆದಿದ್ದು, 4 ವರ್ಷದ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಸರ್ಕಾರಿ ಸ್ವಾಮ್ಯದ ಬಾಬಾ ರಾಘವದಾಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಈ ಘಟನೆ ಹಿನ್ನಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಆರೋಗ್ಯ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಅವರು ರಾಜಿನಾಮೆ ನೀಡಬೇಕೆಂದು ನಿನ್ನೆಯಷ್ಟೇ ಪ್ರತಿಪಕ್ಷಗಳು ಆಗ್ರಹಿಸಿದ್ದವು.
ಒಂದೆಡೆ ಆಮ್ಲಜನಕ ಕೊರತೆಯಿಂದಾಗಿ ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿವೆ ಎಂಬ ಮಾತುಗಳು ಕೇಳಿ ಬರತೊಡಗಿವೆ. ಆದರೆ, ಇದನ್ನು ತಿರಸ್ಕರಿಸಿರುವ ರಾಜ್ಯ ಸರ್ಕಾರ, ವೈದ್ಯರು-ಸಿಬ್ಬಂದಿಗಳ ನಿರ್ಲಕ್ಷ್ಯ ಹಾಗೂ ಮೆದುಳಿನ ಉರಿಯೂತದಿಂದ ಮಕ್ಕಳ ಸಾವು ಸಂಭವಿಸಿದೆ ಎಂದು ಹೇಳುತ್ತಿದೆ.
ಆಮ್ಲಜನಕ ಪೂರೈಸುವ ಕಂಪನಿಗೆ ಬಾಕಿ ಉಳಿಸಿಕೊಂಡ ಆಸ್ಪತ್ರೆಯ ಪ್ರಾಂಶುಪಾಲರನ್ನು ನಿನ್ನೆ ಅಮಾನತುಕೊಳಿಸಲಾಗಿದೆ. ಈ ಪ್ರಕರಣದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಅವಲೋಕನ ನಡೆಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ಸಿಎಂ ಯೋಗಿ ಆದಿತ್ಯನಾಥ್ ಅವರು ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಿದ್ದು, ಕೇಂದ್ರ ಸರ್ಕಾರ ಆಸ್ಪತ್ರೆಗೆ ತಂಡವೊಂದನ್ನು ರವಾನಿಸಿದೆ. ಅಲ್ಲದೆ, ಇಂದು ಸ್ವತಃ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಗೋರಕ್ ಪುರಕ್ಕೆ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
DeathUttar pradeshಉತ್ತರ ಪ್ರದೇಶಸಾವುಲಖನೌLucknowCM Yogi Adityanathಸಿಎಂ ಯೋಗಿ ಆದಿತ್ಯಾನಾಥ್Gorakhpur hospital tragedyಗೋರಕ್ ಪುರ ಆಸ್ಪತ್ರೆ ದುರಂತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


