ದೇಶ

ಆಮ್ಲಜನಕ ಕೊರತೆಯಿಂದ ಮಕ್ಕಳ ಸಾವು ಘೋರ ದುರಂತ, ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಗೋರಕ್'ಪುರ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮಕ್ಕಳು ಸಾವನ್ನಪ್ಪಿರುವುದು ಘೋರ ದುರಂತವಾಗಿದ್ದು, ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಹೇಳಿದ್ದಾರೆ...

ಆಮ್ಲಜನಕ ಕೊರತೆಯಿಂದ ಮಕ್ಕಳ ಸಾವು ಘೋರ ದುರಂತ, ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ: ಸಿಎಂ ಯೋಗಿ ಆದಿತ್ಯನಾಥ್
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Published On :

ಲಖನೌ: ಗೋರಕ್'ಪುರ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮಕ್ಕಳು ಸಾವನ್ನಪ್ಪಿರುವುದು ಘೋರ ದುರಂತವಾಗಿದ್ದು, ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಹೇಳಿದ್ದಾರೆ. 

ಗೋರಕ್ ಪುರ ಆಸ್ಪತ್ರೆ ದುರಂತ ಪ್ರಕರಣ ಸಂಬಂಧ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಅವರು, ಮಕ್ಕಳ ಸಾವು ದುರಾದೃಷ್ಟಕರ. ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ದುರಂತ ಸಂಬಂಧ ಸಂಪೂರ್ಣ ಮಾಹಿತಿ ಪಡೆದ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 

ಪ್ರಕರಣ ಸಂಬಂಧ ತನಿಖೆ ನಡೆಸಲು ರಾಜ್ಯ ಮುಖ್ಯ ಕಾರ್ಯದರ್ಶಿ ಅಡಿಯಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಆಸ್ಪತ್ರೆಗೆ ಆಮ್ಲಜನಕ ಪೂರೈಸಲು ಗ್ಯಾಸ್ ವೆಂಡರ್ ಗಳನ್ನು ನೇಮಿಸಲಾಗಿತ್ತು. ಈ ಕುರಿತು ಈಗಾಗಲೇ ತನಿಖೆ ಆರಂಭವಾಗಿದೆ. ಬಿಆರ್ ಡಿ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅವರ ವಿರುದ್ಧ ತನಿಖೆ ನಡೆಸಲಾಗುತ್ತದೆ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. 

ಮಾಧ್ಯಮಗಳು ಪ್ರಕರಣವನ್ನು ಬೆಳಕಿಗೆ ತಂದಿದೆ. ದುರ್ಘಟನೆ ನಿಜಕ್ಕೂ ದುರಾದೃಷ್ಟಕರವಾದದ್ದು. ಮೃತ ಮಕ್ಕಳ ಕುಟುಂಬಸ್ಥರ ಕುರಿತಂತೆ ಸಂತಾಪವನ್ನು ಸೂಚಿಸುತ್ತೇನೆ. 

ಆದಿತ್ಯನಾಥ್ ಅವರ ಲೋಕಸಭಾ ಕ್ಷೇತ್ರವಾಗಿರುವ ಗೋರಕ್ ಪುರದ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜಿನಲ್ಲಿ ಈ ವರೆಗೂ 70 ಮಕ್ಕಳು ಆಮ್ಲಜನಕ ಕೊರತೆಯಿಂದಾಗಿ ಮೃತಪಟ್ಟಿದ್ದವು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.