ಗೋರ್ಖಾಲ್ಯಾಂಡ್ ಪ್ರತಿಭಟನೆ: ಜಿಜೆಎಂ ಮುಖ್ಯಸ್ಥರನ್ನು ಭೇಟಿ ಮಾಡಲಿರುವ ರಾಜನಾಥ್ ಸಿಂಗ್
ಗೋರ್ಖಾಲ್ಯಾಂಡ್ ಪ್ರತಿಭಟನೆಗೆ ಸಂಬಂಧಿಸಿದಂತೆ ಗೋರ್ಖಾ ಜನಮುಕ್ತಿ ಮೋರ್ಚಾದ ಮುಖ್ಯಸ್ಥ ಬಿಮಲ್ ಗುರುಂಗ್ ಅವರನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

Published On :
ನವದೆಹಲಿ: ಗೋರ್ಖಾಲ್ಯಾಂಡ್ ಪ್ರತಿಭಟನೆಗೆ ಸಂಬಂಧಿಸಿದಂತೆ ಗೋರ್ಖಾ ಜನಮುಕ್ತಿ ಮೋರ್ಚಾದ ಮುಖ್ಯಸ್ಥ ಬಿಮಲ್ ಗುರುಂಗ್ ಅವರನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಸಂಜೆ 4:30 ಕ್ಕೆ ನವದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಮಾತುಕತೆಗೆ ಹಾಜರಾಗುವಂತೆ ಕೇಂದ್ರ ಗೃಹ ಇಲಾಖೆ ಜಿಜೆಎಂ ಗೆ ಸೂಚನೆ ನೀಡಿದೆ. ಗೋರ್ಖಾಲ್ಯಾಂಡ್ ಪ್ರತ್ಯೇಕ ರಾಜ್ಯಕ್ಕಾಗಿ ಕೇಳಿಬಂದಿರುವ ಬೇಡಿಕೆ ಜನರ ಚಳುವಳಿಯಗಿದ್ದು, ಎಲ್ಲಾ ಪಕ್ಷಗಳು ಹಾಗೂ ರಾಜಕೀಯೇತರ ಸಂಸ್ಥೆಗಳೊಂದಿಗೆ ಗೃಹ ಇಲಾಖೆಯ ಆಹ್ವಾನವನ್ನು ಪರಿಗಣಿಸಿದ್ದೇವೆ ಎಂದು ಹೇಳಿದ್ದಾರೆ.
ಚಳುವಳಿಯನ್ನು ಪ್ರಾರಂಭಿಸಿರುವ ಪಕ್ಷಗಳು ಈ ಸಭೆಯಲ್ಲಿ ಭಾಗವಹಿಸಲಿದ್ದು, ಗೋರ್ಖಾಲ್ಯಾಂಡ್ ರಾಜ್ಯದ ಬೇಡಿಕೆಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಕಂಡುಕೊಳ್ಳಲು ಈ ಸಭೆಯಲ್ಲಿ ಸಾಧ್ಯವಾಗಲಿದೆ ಎಂಬ ವಿಶ್ವಾಸವಿದೆ ಎಂದು ಗೋರ್ಖಾ ಜನಮುಕ್ತಿ ಮೋರ್ಚಾದ ಮುಖ್ಯಸ್ಥರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


