ದೆಹಲಿಯಲ್ಲಿ ಮತ್ತೊಂದು ಹೀನ ಕೃತ್ಯ: ಆತ್ಯಾಚಾರ ಮಾಡಿ 4ನೇ ಅಂತಸ್ತಿನಿಂದ ಯುವತಿಯ ಎಸೆದ ದುಷ್ಕರ್ಮಿ?
ರಾಷ್ಟ್ರ ರಾಜಧಾನಿ ದೆಹಲಿ ಮತ್ತೊಂದು ಹೀನಕೃತ್ಯಕ್ಕೆ ಸಾಕ್ಷಿಯಾಗಿದ್ದು, ಯುವತಿಯೊಬ್ಬಳನ್ನು ಅತ್ಯಾಚಾರ ಮಾಡಿದ ದುಷ್ಕರ್ಮಿಯೊಬ್ಬ ಆಕೆಯನ್ನು ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಗೆ ಎಸೆದಿದ್ದಾನೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತೊಂದು ಹೀನಕೃತ್ಯಕ್ಕೆ ಸಾಕ್ಷಿಯಾಗಿದ್ದು, ಯುವತಿಯೊಬ್ಬಳನ್ನು ಅತ್ಯಾಚಾರ ಮಾಡಿದ ದುಷ್ಕರ್ಮಿಯೊಬ್ಬ ಆಕೆಯನ್ನು ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಗೆ ಎಸೆದಿದ್ದಾನೆ ಎಂದು ತಿಳಿದುಬಂದಿದೆ.
ದೆಹಲಿಯ ರೋಹಿಣಿಯಲ್ಲಿರುವ ಬೇಗಂಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತೀವ್ರ ಗಾಯಗೊಂಡಿರುವ ಯುವತಿ ಪ್ರಸ್ತುತ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ. ಪೊಲೀಸ್ ಮೂಲಗಳ ಪ್ರಕಾರ ದೆಹಲಿಯ ಪಂಚತಾರಾ ಹೋಟೆಲ್ ಒಂದರಲ್ಲಿ ಅಡುಗೆ ಸಹಾಯಕರಾಗಿ ಯುವತಿ ಕೆಲಸ ಮಾಡುತ್ತಿದ್ದರು.
ಯುವತಿಯ ಸ್ನೇಹಿತನೋರ್ವ ಮನೆಗೆ ಡ್ರಾಪ್ ಮಾಡುವುದಾಗಿ ಹೇಳಿ ಬಳಿಕ ಏನೋ ಮಾತನಾಡಬೇಕು ಎಂದು ಆಕೆಯನ್ನು ಪುಸಲಾಯಿಸಿ ನಿರ್ಮಾಣ ಹಂತದ ಕಟ್ಟಡದ ನಾಲ್ಕನೇ ಅಂತಸ್ತಿಗೆ ಕರೆದೊಯ್ದಿದ್ದು, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಆಕೆಯ ಅದಕ್ಕೆ ವಿರೋಧಿಸಿದಾಗ ಆಕೆಯನ್ನು ನಿಂದಿಸಿದ್ದಾನೆ. ಬಳಿಕ ಆಕೆಯ ಮೇಲೆ ಬಲಾತ್ಕಾರ ಮಾಡಿ ಪೊಲೀಸರಿಗೆ ದೂರು ನೀಡುತ್ತೇನೆ ಎಂದಾಗ ಆಕೆಯನ್ನು ನಾಲ್ಕನೇ ಅಂತಸ್ತಿನಿಂದ ಕೆಳಗೆ ಎಸೆದಿದ್ದಾನೆ ಎಂದು ಹೇಳಲಾಗಿದೆ.
ದುಷ್ಕರ್ಮಿ ಮತ್ತೊಂದು ಪಂಚತಾರಾ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದು, ಪ್ರಸ್ತುತ 24 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಆತನ ವಿರುದ್ಧ ಅತ್ಯಾಚಾರ, ಕೊಲೆಯತ್ನ ಮತ್ತು ಅಪಹರಣ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


