ಪ್ರತ್ಯೇಕ ಗೋರ್ಖಾಲ್ಯಾಂಡ್ ಚಳುವಳಿ: 25 ದಿನಗಳ ಜಿಜೆಎಂ ಉಪವಾಸ ಇಂದು ಅಂತ್ಯ
ಪ್ರತ್ಯೇಕ ಗೋರ್ಖಾಲ್ಯಾಂಡ್ ಗಾಗಿ ಒತ್ತಾಯಿಸಿ ಕಳೆದ 25 ದಿನಗಳಿಂದ ಗೋರ್ಖಾ ಜನಮುಕ್ತಿ ಮೋರ್ಚಾ(ಜಿಜೆಎಂ) ನಡೆಸುತ್ತಿದ್ದ...

Published On :
ಡಾರ್ಜೀಲಿಂಗ್: ಪ್ರತ್ಯೇಕ ಗೋರ್ಖಾಲ್ಯಾಂಡ್ ಗಾಗಿ ಒತ್ತಾಯಿಸಿ ಕಳೆದ 25 ದಿನಗಳಿಂದ ಗೋರ್ಖಾ ಜನಮುಕ್ತಿ ಮೋರ್ಚಾ(ಜಿಜೆಎಂ) ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಸೋಮವಾರ ಅಂತ್ಯಗೊಳ್ಳಲಿದೆ.
ಗೋರ್ಖಾಲ್ಯಾಂಡ್ ಪ್ರತಿಭಟನೆಗೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗೋರ್ಖಾ ಜನಮುಕ್ತಿ ಮೋರ್ಚಾದ ಮುಖ್ಯಸ್ಥ ಬಿಮಲ್ ಗುರುಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅಲ್ಲದೆ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಇಂದು ಉಪವಾಸ ಸತ್ಯಾಗ್ರಹ ಹಿಂಪಡೆಯಲು ಜಿಜೆಎಂ ನಿರ್ಧರಿಸಿದೆ.
ಗೋರ್ಖಾಲ್ಯಾಂಡ್ ವಿವಾದ ಪರಿಹಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರಾಜನಾಥ್ ಸಿಂಗ್ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


