ಸಮಾಜ ಒಡೆಯುತ್ತಿರುವ ಶಕ್ತಿಗಳ ವಿರುದ್ಧ ಒಗ್ಗಟ್ಟಾಗಿ ಹೋರಾಡಿ: ಸೋನಿಯಾ ಕರೆ
ಸಮಾಜವನ್ನು ಒಡೆಯುತ್ತಿರುವ ಭಯೋತ್ಪಾದನೆ, ಪ್ರತ್ಯೇಕತೆ ವಿರುದ್ಧ ಪ್ರತಿಯೊಬ್ಬ ಭಾರತೀಯನು ಒಗ್ಗಟ್ಟಾಗಿ ಹೋರಾಡುವ ಅವಶ್ಯಕತೆಯಿದೆ...

Published On :
ನವದೆಹಲಿ: ಸಮಾಜವನ್ನು ಒಡೆಯುತ್ತಿರುವ ಭಯೋತ್ಪಾದನೆ, ಪ್ರತ್ಯೇಕತೆ ವಿರುದ್ಧ ಪ್ರತಿಯೊಬ್ಬ ಭಾರತೀಯನು ಒಗ್ಗಟ್ಟಾಗಿ ಹೋರಾಡುವ ಅವಶ್ಯಕತೆಯಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶದ ಜನತೆಗೆ ಶುಭಾಶಯ ಹೇಳಿರುವ ಅವರು, ಪ್ರತ್ಯೇಕತೆ ವಿರುದ್ಧ ಎಲ್ಲಾ ಭಾರತೀಯರು ಒಗ್ಗಟ್ಟಾಗಿ ಹೋರಾಡುವ ಅವಶ್ಯಕತೆಯಿದೆ ಎಂದು ಸೋನಿಯಾ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಯಾವಾಗಲೂ ಈ ದೇಶ ಪ್ರಗತಿ ಹೊಂದಬೇಕು ಎಂದು ಆಶಿಸುತ್ತೇನೆ, ಪ್ರತಿಯೊಬ್ಬರು ಸ್ವತಂತ್ರ್ಯ ಭಾರತೀಯನಾಗಿರುವುದಕ್ಕೆ ಹೆಮ್ಮೆ ಪಡಬೇಕು , 71ನೇ ಸ್ವಾತಂತ್ರೋತ್ಸವ ಪ್ರತಿಯೊಬ್ಬರಿಗೂ ಸಂತೋಷ, ಸಮೃದ್ದಿ, ಆರೋಗ್ಯ ತರಲಿ ಎಂದು ಬಯಸುವುದಾಗಿ ಹೇಳಿದ್ದಾರೆ.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಪಕ್ಷದ ಹಲವು ಹಿರಿಯ ಮುಖಂಡರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


