ಕಾಶ್ಮೀರ ಕುರಿತು ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಒಮರ್ ಅಬ್ದುಲ್ಲಾ ಕಿಡಿ
71ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಕಾಶ್ಮೀರ ಬಿಕ್ಕಟ್ಟು ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ್ದ ಹೇಳಿಕೆಗೆ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ...

Published On :
ನವದೆಹಲಿ: 71ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಕಾಶ್ಮೀರ ಬಿಕ್ಕಟ್ಟು ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ್ದ ಹೇಳಿಕೆಗೆ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಮಂಗಳವಾರ ಕಿಡಿಕಾರಿದ್ದಾರೆ.
ಮೋದಿಯವರ ಹೇಳಿಕೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕಾಶ್ಮೀರ ಬಿಕ್ಕಟ್ಟು ಗುಂಡುಗಳಿಂದಾಗಲೂ ಅಥವಾ ಬೈಗುಳಗಳಿಂದಾಗಲೀ ಬಗೆಹರಿಯುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳುತ್ತಿದ್ದಾರೆ. ಕಾಶ್ಮೀರದಲ್ಲಿ ಒಂದೆಡೆ ಉಗ್ರರು ಗುಂಡು ಹಾರಿಸುತ್ತಿದ್ದಾರೆ, ಮತ್ತೊಂದೆಡೆ ಭದ್ರತಾ ಸಿಬ್ಬಂದಿಗಳು ಗುಂಡು ಹಾರಿಸುತ್ತಿದ್ದಾರೆ, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವಿನ ಘರ್ಷಣೆಗಳಿಂದಾಗಿ ಕಾಶ್ಮೀರ ಸಮಸ್ಯೆ ಬಗೆಹರಿಯುತ್ತಿಲ್ಲ ಎಂದು ಹೇಳಿದ್ದಾರೆ.
ನೋಟು ನಿಷೇಧ ಬಳಿಕ ಕಪ್ಪುಹಣ ಸಂಪೂರ್ಣವಾಗಿ ಭಾರತಕ್ಕೆ ಬರಲಿದೆ ಎಂದು ಮೋದಿಯವರು ಹೇಳಿದ್ದರು. ಇದೀಗ ಆರ್'ಬಿಐ ನಿಷೇಧಿತ ನೋಟುಗಳ ಎಣಿಕೆ ಕಾರ್ಯ ಪೂರ್ಣಗೊಂಡಿದೆ ಎಂದು ಹೇಳುತ್ತಿದೆ. ಆದರೆ, ಈ ಮೊದಲು ಕೇಂದ್ರ ನೀಡಿದ್ದ ಅಂಕಿ ಅಂಶಕ್ಕೂ ಇದೀಗ ಆರ್'ಬಿಐ ಅಧಿಕಾರಿಗಳು ನೀಡುತ್ತಿರುವ ಅಂಕಿ ಅಂಶಕ್ಕೂ ಒಂದಕ್ಕೊಂದು ಹೋಲಿಕೆಯಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನಲೆಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಮಂತ್ರಿ ಮೋದಿಯವರು, ಗುಂಡುಗಳಾಗಲೀ ಅಥವಾ ಬೈಗುಗಳಿಂದಾಗಲೀ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ. ಕೇವಲ ಪ್ರೀತಿಯಿಂದ ಮಾತ್ರ ಬಿಕ್ಕಟ್ಟು ಬಗೆಹರಿಯಲು ಸಾಧ್ಯ. ಕಾಶ್ಮೀರ ಸಮಸ್ಯೆಗೆ ಬಗೆಹರಿಸಲು ಬಂದೂಕುಗಳು ಬೇಕಿಲ್ಲ, ಪರಸ್ಪರ ಅಪ್ಪುಗೆಯೇ ಸಾಕು ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


