ದೇಶ

2014ರ ನಂತರ ಪ್ರಧಾನಿ ಮೋದಿಯವರ ಕಡಿಮೆ ಅವಧಿಯ ಸ್ವಾತಂತ್ರ್ಯ ದಿನದ ಭಾಷಣ

ಭಾರತದ 71ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ...

2014ರ ನಂತರ ಪ್ರಧಾನಿ ಮೋದಿಯವರ ಕಡಿಮೆ ಅವಧಿಯ ಸ್ವಾತಂತ್ರ್ಯ ದಿನದ ಭಾಷಣ
ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನದ ಭಾಷಣ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
Published On :
ನವದೆಹಲಿ: ಭಾರತದ 71ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಮಾಡಿದ ಭಾಷಣ ಕಳೆದ ನಾಲ್ಕು ವರ್ಷಗಳಲ್ಲಿ ಈ ವರ್ಷ ಕಡಿಮೆ ಅವಧಿಯದಾಗಿತ್ತು.
ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಕಳೆದ ಬಾರಿ ಮೋದಿಯವರು, ತಮ್ಮ ಸ್ವಾತಂತ್ರ್ಯ ದಿನಾಚರಣೆ ಭಾಷಣ ತುಂಬಾ ಉದ್ದವಾಗಿರುತ್ತದೆ ಎಂದು ಜನರು ಪತ್ರ ಬರೆದಿದ್ದಾರೆ. ಹೀಗಾಗಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಭಾಷಣವನ್ನು ಚಿಕ್ಕದಾಗಿ ಮಾಡುವುದಾಗಿ ಭರವಸೆ ನೀಡಿದ್ದರು. 
ತಾವು ಕೊಟ್ಟ ಮಾತಿನಂತೆ ನಡೆದಿರುವ ಪ್ರಧಾನಿ ಇಂದು 54 ನಿಮಿಷಗಳ ಕಾಲ ಭಾಷಣ ಮಾಡಿದ್ದು ಅವರು 2014ರ  ನಂತರ ಕಡಿಮೆ ಸಮಯದಲ್ಲಿ ಮಾಡಿದ ಸ್ವಾತಂತ್ರ್ಯ ದಿನಾಚರಣೆಯ ಭಾಷಣವಾಗಿದೆ.
ಮೋದಿಯವರು 2014ರಲ್ಲಿ 65 ನಿಮಿಷ, 2015ರಲ್ಲಿ 86 ನಿಮಿಷ ಹಾಗೂ 2016ರಲ್ಲಿ 94 ನಿಮಿಷ ಮಾತನಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.