ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿ ಪಾಕ್, ಓರ್ವ ಮಹಿಳೆಗೆ ಗಾಯ
ಸ್ವಾತಂತ್ರ್ಯ ದಿನಾಚರಣೆಯಂದೂ ಪಾಕಿಸ್ತಾನ ಸೇನಾ ಪಡೆಗಳು ಕಾಶ್ಮೀರದ ಉರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಎರಡು ಪ್ರದೇಶಗಳಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು...

Published On :
ಶ್ರೀನಗರ: ಸ್ವಾತಂತ್ರ್ಯ ದಿನಾಚರಣೆಯಂದೂ ಪಾಕಿಸ್ತಾನ ಸೇನಾ ಪಡೆಗಳು ಕಾಶ್ಮೀರದ ಉರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಎರಡು ಪ್ರದೇಶಗಳಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಯೋಧರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ.
ಪಾಕಿಸ್ತಾನ ಸೇನೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಹನೀಫಾ ಬೇಗಂ ಎಂಬ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ನೀಡಲಾಗಿದೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉರಿ ಸೆಕ್ಟರ್ ಬಳಿ ಎರಡು ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಭಾರತೀಯ ಯೋಧರು ಹಾಗೂ ನಾಗರಿಕರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆಂದು ಹೇಳಿದ್ದಾರೆ.
ಉತ್ತರ ಕಾಶ್ಮೀರದಲ್ಲಿ ಪಾಕಿಸ್ತಾನ ಸೈನಿಕರು ಸತತ 3 ದಿನಗಳಿಂದ ಕದನ ವಿರಾಮ ಉಲ್ಲಂಘನೆ ನಡೆಸಿದ್ದಾರೆ. ಒಂದು ಕಡೆ ಪಾಕಿಸ್ತಾನಿ ಅರೆಸೇನಾ ಪಡೆಗಳಿಂದ ಭಾರತೀಯ ಯೋಧರು ಸ್ವಾತಂತ್ರ್ಯ ದಿನಾಚರಣೆಯ ಸಿಹಿ ಹಂಚುತ್ತಿದ್ದರೆ, ಮತ್ತೊಂದೆಡೆ ಪಾಕಿಸ್ತಾನ ಯೋಧರು ಗುಂಡಿನ ಮಳೆಗೆರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyPakistanಪಾಕಿಸ್ತಾನCeasefire ViolationKashmirಕಾಶ್ಮೀರಕದನ ವಿರಾಮ ಉಲ್ಲಂಘನೆಭಾರತೀಯ ಸೇನೆIndependence Dayಸ್ವಾತಂತ್ರ್ಯ ದಿನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


