ದೇಶ

ಲವ್ ಜಿಹಾದ್ ಪ್ರಕರಣ: ಕೇರಳ ಯುವತಿಯ ಮತಾಂತರ, ಮದುವೆ, ಎನ್ಐಎ ತನಿಖೆಗೆ ಸುಪ್ರೀಂ ಆದೇಶ

ಕೇರಳದ ಹಿಂದೂ ಯುವತಿಯೊಬ್ಬಳು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮುಸ್ಲಿಂ ಯುವಕನನ್ನು ವಿವಾಹವಾದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸಬೇಕೆಂದು ಸುಪ್ರೀಂಕೋರ್ಟ್...

ಲವ್ ಜಿಹಾದ್ ಪ್ರಕರಣ: ಕೇರಳ ಯುವತಿಯ ಮತಾಂತರ, ಮದುವೆ, ಎನ್ಐಎ ತನಿಖೆಗೆ ಸುಪ್ರೀಂ ಆದೇಶ
ಸುಪ್ರೀಂಕೋರ್ಟ್ (ಸಂಗ್ರಹ ಚಿತ್ರ)
Published On :

ನವದೆಹಲಿ: ಕೇರಳದ ಹಿಂದೂ ಯುವತಿಯೊಬ್ಬಳು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮುಸ್ಲಿಂ ಯುವಕನನ್ನು ವಿವಾಹವಾದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸಬೇಕೆಂದು ಸುಪ್ರೀಂಕೋರ್ಟ್ ಬುಧವಾರ ಆದೇಶಿಸಿದೆ. 

ಕೇರಳದ ಹಿಂದೂ ಯುವತಿಯೊಬ್ಬಳನ್ನು ವಿವಾಹವಾದ ಹಾಗೂ ಮತಾಂತರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸಲಿ ಎಂದು ಸುಪ್ರೀಂಕೋರ್ಟ್ ಪೀಠದ ಸಿಜೆಐ ಜಗದೀಶ್ ಸಿಂಗ್ ಖೇಹರ್ ಮತ್ತು ನ್ಯಾ.ಡಿ.ವೈ. ಚಂದ್ರಾಚೂಡ್ ಅವರನ್ನೊಳಗೊಂಡ ಪೀಠ ಆದೇಶಿಸಿದೆ. 

ಅಖಿಲ ಎಂಬ ಹಿಂದೂ ಯುವತಿಯೊಬ್ಭಳು 2016ರಲ್ಲಿ ಮುಸ್ಲಿಂ ಯುವಕ ಶಫಿನ್ ಜಹಾನ್ ಎಂಬ ಯುವಕನನ್ನು ವಿವಾಹವಾಗಿದ್ದಳು. ವಿವಾಹಾದ ಬಳಿಕ ಯುವಕತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಆಕೆಯ ಹೆಸರನ್ನು ಹಾದಿಯಾ ಶಫಿನ್ ಎಂಬು ಬದಲಾಯಿಸಲಾಗಿತ್ತು. 

ಮತಾಂತರ ವಿಚಾರ ತಿಳಿದಿದ್ದ ತಂದೆ ಮಗಳನ್ನು ಅಪಹರಿಸಿ, ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಎಂದು ಹೇಳಿ ಕೇರಳದ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದ ಕೇರಳ ಹೈಕೋರ್ಟ್ ಇದು ಲವ್ ಜಿಹಾದ್ ಪ್ರಕರಣವಾಗಿದ್ದು, ರಾಜ್ಯ ಪೊಲೀಸರು ತನಿಖೆ ನಡೆಸುವಂತೆ ಆದೇಶ ನೀಡಿತ್ತು.

ಇದಕ್ಕೆ ಮಹಿಳೆಯ ಪತಿ ಶಫಿನ್ ಜಹಾನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ. ನ್ಯಾಯಾಲಯದ ಆದೇಶ ಭಾರತದ ಮಹಿಳಾ ಸ್ವಾತಂತ್ರ್ಯಕ್ಕೆ ಮಾಡಿದ ಅವಮಾನ ಎಂದು ಹೇಳಿ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ. 

ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಇದೊಂದು ಅತ್ಯಂತ ಸೂಕ್ಷ್ಮವಾದ ಪ್ರಕರಣವಾಗಿದ್ದು, ಯುವತಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ನೀಡುವಂತೆ ತಿಳಿಸಿತ್ತು. 

ಇದೀಗ ಪ್ರಕರಣ ಸಂಬಂಧ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್, ಪ್ರಕರಣವನ್ನು ಎನ್ಐಎ ತನಿಖೆ ನಡೆಸುವಂತೆ ಆದೇಶ ನೀಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.