ರೋಹಿತ್ ವೇಮುಲ ಕೇಸ್: ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ; ತನಿಖಾ ಆಯೋಗ
ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ...

Published On :
ಹೈದರಾಬಾದ್ : ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆಗೆ ವಯಕ್ತಿಕ ಸಮಸ್ಯೆೆಗಳೇ ಕಾರಣ ಎಂದು ಪ್ರಕರಣ ಸಂಬಂಧ ಮಾನವ ಸಂಪನ್ಮೂಲ ಇಲಾಖೆ ನೇಮಿಸಿದ್ದ ತನಿಖಾ ಆಯೋಗ ಹೇಳಿದೆ.
ಹೈದರಾಬಾದ್ ವಿಶ್ವ ವಿದ್ಯಾನಿಲಯ ಕೈಗೊಂಡ ಕ್ರಮದಿಂದ ಆತ್ಮಹತ್ಯೆಗೆ ಶರಣಾಗಿಲ್ಲ, ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಿವೃತ್ತ ಜಸ್ಟೀಸ್ ಎಕೆ ರೂಪಾನ್ವಾಲ್ ಆಯೋಗ ತಿಳಿಸಿದೆ.
ರೋಹಿತ್ ವೇಮುಲಾ ಅವರನ್ನು ಹಾಸ್ಟೆಲ್ ನಿಂದ ಹೊರ ಹಾಕಿದ್ದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆತ ಹಲವಾರು ಕಾರಣಗಳಿಂದ ಅಸಮಾಧಾನಗೊಂಡಿದ್ದ. ರೋಹಿತ್ ವೇಮುಲಾ ವಯಕ್ತಿಕ ಸಮಸ್ಯೆಗಳಿಗೆ ಸಿಲುಕಿ ಹಾಕಿಕೊಂಡಿದ್ದ ಎಂಬುದು ಆತನ ಸೂಸೈಡ್ ನೋಟ್ ನಲ್ಲಿ ದಾಖಲಿಸಿದ್ದ ಅಂಶಗಳಿಂದ ತಿಳಿದು ಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಆತನ ಸೂಸೈಡ್ ನೋಟ್ ನಲ್ಲಿ ಆತನ ಸಾವಿಗೆ ಕಾರಣರಾದವರು ಯಾರು ಎಂಬುದರ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ ಎಂದು ಆಯೋಗ ಹೇಳಿದೆ.
2016 ರ ಜನವರಿಯಲ್ಲಿ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ಪ್ರಕರಣದ ಬಗ್ಗೆ ತನಿಖೆ ನಡೆಸಲು ಮಾನವಸಂಪನ್ಮೂಲ ಸಚಿವಾಲಯ ಜಸ್ಟೀಸ್ ರೂಪಾನ್ವಾಲ್ ಆಯೋಗವನ್ನು ರಚಿಸಿತ್ತು. ವೇಮುಲಾ ಕುಟುಂಬದ ಸದಸ್ಯರು, ರಾಜಕೀಯದ ಜತೆ ನಂಟು ಹೊಂದಿರುವ ಗೆಳೆಯರು ಆತಮ ಆತ್ಮಹತ್ಯೆಗೆ ವಿವಿ ಆಡಳಿತ ಮಂಡಳಿಯೆ ಕಾರಣ ಎಂದು ಆರೋಪಿಸಿದ್ದರು. ಆದರೆ ತನಿಖಾ ಆಯೋಗದ ವರದಿಯಲ್ಲಿ ರೋಹಿತ್ ಆತ್ಮಹತ್ಯೆಗೂ ವಿವಿ ಆಡಳಿತ ಮಂಡಳಿಗೂ ಯಾವುದೇ ಸಂಬಂಧ ವಿಲ್ಲ ಎಂದು ಹೇಳುವ ಮೂಲಕ, ಕೇಂದ್ರ ಸಚಿವರುಗಳಾದ ಸ್ಮೃತಿ ಇರಾನಿ ಮತ್ತು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರಿಗೆ ಕ್ಲೀನ್ ಚಿಟ್ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆತ್ಮಹತ್ಯೆ ಪ್ರಕರಣRohith VemulaHyderabad Central Universityರೋಹಿತ್ ವೇಮುಲಹೈದರಾಬಾದ್ ವಿಶ್ವ ವಿದ್ಯಾನಿಲಯSucide caseRoopanwal Commissionರೂಪನ್ವಾಲ್ ಆಯೋಗ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


