ಜಯಾ ಪೊಯೆಸ್ ಗಾರ್ಡನ್ ನಿವಾಸ ಸ್ಮಾರಕವಾಗಿ ಪರಿವರ್ತಿಸಲು ದೀಪಾ ವಿರೋಧ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜೆ. ಜಯಲಲಿತಾ ಅವರ ಪೊಯೆಸ್ ಗಾರ್ಡನ್ ನಿವಾಸವನ್ನು ಸ್ಮಾರಕವನ್ನಾಗಿ ಪರಿವರ್ತಿಸಲು...

Published On :
ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜೆ. ಜಯಲಲಿತಾ ಅವರ ಪೊಯೆಸ್ ಗಾರ್ಡನ್ ನಿವಾಸವನ್ನು ಸ್ಮಾರಕವನ್ನಾಗಿ ಪರಿವರ್ತಿಸಲು ಮುಂದಾಗಿರುವ ತಮಿಳುನಾಡು ಸರ್ಕಾರದ ಕ್ರಮವನ್ನು ಜಯಲಲಿತಾ ಅವರ ಸೋದರ ಸೊಸೆ ದೀಪಾ ಜಯಕುಮಾರ್ ಅವರು ವಿರೋಧಿಸಿದ್ದಾರೆ.
ನಿನ್ನೆಯಷ್ಟೆ ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು, ಜಯಲಲಿತಾ ಸಾವಿನ ಕುರಿತು ತನಿಖೆಗೆ ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಆಯೋಗ ರಚಿಸುವುದಾಗಿ ಹಾಗೂ ಅವರ ಪೊಯೆಸ್ ಗಾರ್ಡನ್ ನಿವಾಸವನ್ನು ಸ್ಮಾರಕವಾಗಿ ಪರಿವರ್ತಿಸಲಾಗುವುದು ಮತ್ತು ಸರ್ಕಾರವೇ ಅದನ್ನು ನಿರ್ವಹಣೆ ಮಾಡಲಿದೆ ಎಂದು ಘೋಷಿಸಿದ್ದರು.
ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ದೀಪಾ ಜಯಕುಮಾರ್ ಅವರು, ಜಯಲಲಿತಾ ಅವರ ನಿವಾಸದ ಮೇಲೆ ತಮಗೆ ನೈತಿಕ ಮತ್ತು ಕಾನೂನಿನ ಹಕ್ಕಿದೆ ಎಂದು ಹೇಳಿದ್ದಾರೆ.
ಪೊಯೆಸ್ ಗಾರ್ಡನ್ ಆಸ್ತಿಯಲ್ಲಿ ಪಾಲುದಾರಿಕೆಗೆ ನೈತಿಕ ಮತ್ತು ಕಾನೂನಾತ್ಮಕ ಹಕ್ಕುಗಳನ್ನು ಹೊಂದಿದ್ದೇವೆ. ಈ ವಿಷಯದಲ್ಲಿ ಮುಖ್ಯಮಂತ್ರಿ ಅವರ ಘೋಷಣೆಯ ಹಿಂದೆ ಕೆಲವು ದುರುದ್ದೇಶಗಳಿವೆ ಎಂದು ದೀಪಾ ದೂರಿದ್ದಾರೆ. ಅಲ್ಲದೆ ಈ ಸಂಬಂಧ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಇಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


