ದೇಶ

ರಾಹುಲ್ ಗಾಂಧಿಗೆ ಭಾರೀ ಹಿನ್ನಡೆ: ಪಕ್ಷದ ಚುನಾವಣಾ ವ್ಯವಸ್ಥಾಪಕ ಆಶಿಶ್ ಕುಲಕರ್ಣಿ ರಾಜಿನಾಮೆ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು ಪಕ್ಷದ ಚುನಾವಣಾ ವ್ಯವಸ್ಥಾಪಕ ಆಶಿಶ್ ಕುಲಕರ್ಣಿ ಅವರು ತಮ್ಮ ಸ್ಥಾನಕ್ಕೆ...

ರಾಹುಲ್ ಗಾಂಧಿಗೆ ಭಾರೀ ಹಿನ್ನಡೆ: ಪಕ್ಷದ ಚುನಾವಣಾ ವ್ಯವಸ್ಥಾಪಕ ಆಶಿಶ್ ಕುಲಕರ್ಣಿ ರಾಜಿನಾಮೆ
ರಾಹುಲ್ ಗಾಂಧಿ
Published On :
ನವದೆಹಲಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು ಪಕ್ಷದ ಚುನಾವಣಾ ನಿರ್ದೇಶಕ ಆಶಿಶ್ ಕುಲಕರ್ಣಿ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. 
ಕಾಂಗ್ರೆಸ್ ಸಹಕಾರ ಕೇಂದ್ರದ ಸದಸ್ಯರಾಗಿರುವ ರಾಹುಲ್ ಗಾಂಧಿ ಆಪ್ತ ಆಶಿಶ್ ಕುಲಕರ್ಣಿ ಅವರು ತಮ್ಮ ಸ್ಥಾನಕ್ಕೆ ದಿಢೀರ್ ರಾಜಿನಾಮೆ ನೀಡಿರುವ ಪಕ್ಷಕ್ಕೆ ಭಾರೀ ಹಿನ್ನೆಡೆಯಾಗಿದೆ. ಕೆಲವೊಂದು ವಿಷಯಗಳಲ್ಲಿ ಪಕ್ಷದ ನಿಲುವು ವಿಭಿನ್ನವಾಗಿರುವುದರಿಂದ ತಾವು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ಆಶಿಶ್ ಕುಲಕರ್ಣಿ ಅವರು ರಾಜಿನಾಮೆ ಪತ್ರದಲ್ಲಿ ಬರೆದಿದ್ದಾರೆ. 
ಆಶಿಶ್ ಕುಲಕರ್ಣಿ 2009ರಿಂದ ಪಕ್ಷದಲ್ಲಿ ಪ್ರತಿತಂತ್ರ ರೂಪಿಸುವ ಜವಾಬ್ದಾರಿಯನ್ನು ನಿರ್ವಹಿಸಿಕೊಂಡು ಬರುತ್ತಿದ್ದರು. ಆದರೆ ಸದಸ್ಯದ ಪರಿಸ್ಥಿತಿಯಲ್ಲಿ ಪಕ್ಷ ಯಾವುದೇ ಸವಾಲುಗಳನ್ನು ಸ್ವೀಕರಿಸುವ ಸ್ಥಿತಿಯಲ್ಲಿಲ್ಲ. ಜತೆಗೆ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಯಾರಿಗೂ ನಂಬಿಕೆ ಇಲ್ಲ ಎಂದು ಬರೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.