ಡಾರ್ಜಲಿಂಗ್ ನಲ್ಲಿ ಬಾಂಬ್ ಸ್ಪೋಟ, ಜೀವಹಾನಿ ಇಲ್ಲ.
ಪಶ್ಚಿಮ ಬಂಗಾಳದ ಡಾರ್ಜಲಿಂಗ್ ನಲ್ಲಿ ಶನಿವಾರ ನ್ಬಸುಕಿನ ವೇಳೆ ಬಂಬ್ ಸ್ಫೋಟ ಸಂಭವಿಸಿದ್ದು ಹಲವಾರು ಅಂಗಡಿ ಮುಂಗಟ್ಟುಗಳಿಗೆ ಹಾನಿಯಾಗಿದೆ. ಆದರೆ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಇಲ್ಲ.

Published On :
ಕೋಲ್ಕತ್ತ: ಪಶ್ಚಿಮ ಬಂಗಾಳದ ಡಾರ್ಜಲಿಂಗ್ ನಲ್ಲಿ ಶನಿವಾರ ನ್ಬಸುಕಿನ ವೇಳೆ ಬಂಬ್ ಸ್ಫೋಟ ಸಂಭವಿಸಿದ್ದು ಹಲವಾರು ಅಂಗಡಿ ಮುಂಗಟ್ಟುಗಳಿಗೆ ಹಾನಿಯಾಗಿದೆ. ಆದರೆ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಇಲ್ಲ.
ಶನಿವಾರ ಬೆಳಗಿನ 12.15 ಗಂಟೆಯ ಸಮಯದಲ್ಲಿ ನಗರದ ಹಳೆ ಸೂಪರ್ ಮಾರ್ಕೆಟ್ ಮುಂಭಾಗ ಬಾಂಬ್ ಸ್ಪೋಟಗೊಂಡಿದ್ದು ಆ ಸಮಯ ಅಲ್ಲಿ ಯಾವ ಜನ ಸಂಚಾರವಿರಲಿಲ್ಲ. ಆದರೆ ಇದರಿಂದ ಒಟ್ಟು 12 ಅಂಗಡಿಗಳಿಗೆ ಹಾನಿ ಉಂಟಾಗಿದೆ.
ಘಟನೆ ಕುರಿತಂತೆ ತನಿಖೆ ಕೈಗೊಂಡಿದ್ದೇವೆ. ಶೀಘ್ರದಲ್ಲಿ ತಪ್ಪಿತಸ್ಥರನ್ನು ಕಂಡು ಹಿಡಿಯುತ್ತೇವೆಂದು ಡಾರ್ಜಲಿಂಗ್ ಪೊಲೀಸ್ ಸುಪರಿಟೆಂಡೆಂಟ್ ಅಖೀಲೇಶ್ ಕುಮಾರ್ ಚತುರ್ವೇದಿ ತಿಳಿಸಿದ್ದಾರೆ.
ಪ್ರತ್ಯೇಕ ಗೋರ್ಖಾ ಲ್ಯಾಂಡ್ ರಾಜ್ಯ ರಚನೆಯನ್ನು ಆಗ್ರಹಿಸಿ ಗೋರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಕರೆ ನೀಡಿರುವ ಅನಿರ್ದಿಷ್ಟಾವಧಿ ಬಂದ್‌ನ 69ನೇ ದಿನ ಈ ಬಾಂಬ್ ಸ್ಫೋಟ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


