ಎನ್ ಡಿಎ ಮೈತ್ರಿಕೂಟ ಸೇರುವ ಕುರಿತು ನಿರ್ಣಯ ಅಂಗೀಕರಿಸಿದ ಜೆಡಿ(ಯು)
ಬಿಜೆಪಿ ನೇತೃತ್ವದ ಎನ್'ಡಿಎ ಪಕ್ಷಕ್ಕೆ ಸೇರ್ಪಡೆಯಾಗುವ ಕುರಿತು ಮಂಡಿಸಲಾಗಿದ್ದ ನಿರ್ಣಯಕ್ಕೆ ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) ಪಕ್ಷ ಶನಿವಾರ ಆಂಗೀಕರಿಸಿದೆ...

Published On :
ಪಾಟ್ನ: ಬಿಜೆಪಿ ನೇತೃತ್ವದ ಎನ್'ಡಿಎ ಪಕ್ಷಕ್ಕೆ ಸೇರ್ಪಡೆಯಾಗುವ ಕುರಿತು ಮಂಡಿಸಲಾಗಿದ್ದ ನಿರ್ಣಯಕ್ಕೆ ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) ಪಕ್ಷ ಶನಿವಾರ ಆಂಗೀಕರಿಸಿದೆ.
ಎನ್ ಡಿಎ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಕುರಿತು ನಿತೀಶ್ ಕುಮಾರ್ ಅವರ ಅಧಿಕೃತ ನಿವಾಸದಲ್ಲಿ ಇಂದು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ನಡೆಸಲಾಗಿತ್ತು. ಸಭೆಯಲ್ಲಿ ನಿರ್ಣಯಕ್ಕೆ ಅಂಗೀಕಾರ ನೀಡಲಾಗಿದೆ ಎಂದು ತಿಳಿದುಬಂದಿದೆ.
ನಿತೀಶ್ ಅವರ ಅಧಿಕೃತ ನಿವಾಸದಲ್ಲಿ ಒಂದೆಡೆ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಭೆಗೆ ವಿರೋಧ ವ್ಯಕ್ತಪಡಿಸಿ ಶರದ್ ಯಾದವ್ ಅವರ ಬೆಂಬಲಿಗರು, ರಾಷ್ಟ್ರೀಯ ಜನತಾ ದಳ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಹಿನ್ನಲೆಯಲ್ಲಿ ನಿತೀಶ್ ಅವರ ನಿವಾಸದ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಈ ನಡುವೆ ಪ್ರತಿಕ್ರಿಯೆ ನೀಡಿರುವ ಜೆಡಿ(ಯು( ನಾಯಕ ಕೆ.ಸಿ. ತ್ಯಾಗಿ, ಮೈತ್ರಿ ಕುರಿತಂತೆ ತಮ್ಮ ಅಸಮಾಧಾನ ಹಾಗೂ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಕ್ಕು ಶರದ್ ಯಾದವ್ ಅವರಿಗೆ ಇದೆ. ಆದರೆ, ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಕಾರ್ಯಕ್ರಮಕ್ಕೆ ಅವರು ಹಾಜರಾಗುವುದು ಸರಿಯಲ್ಲ. ಈ ರೀತಿಯ ನಡೆ ಅವರ ಮೇಲಿರುವ ವಿಶ್ವಾಸವನ್ನು ಹಾಳು ಮಾಡಲಿದೆ ಎಂದು ಹೇಳಿದ್ದಾರೆ.
ಜೆಡಿ(ಯು) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಶರದ್ ಯಾದವ್ ಅವರಿಗೂ ಆಹ್ವಾನ ನೀಡಲಾಗಿತ್ತು. ಸಭೆಗೆ ಹಾಜರಾಗಿ ಅವರಲ್ಲಿರುವ ಅಭಿಪ್ರಾಯ ಹಾಗೂ ಅಸಮಾಧಾನವನ್ನು ಹೊರಹಾಕಬಹುದಿತ್ತು. ಆದರೆ, ಲಾಲೂ ಅವರ ಕಾರ್ಯಕ್ರಮಕ್ಕೆ ಹಾಜರಾಗುವುದು ಸರಿಯಲ್ಲ. ಒಂದು ವೇಳೆ ಲಾಲೂ ಕಾರ್ಯಕ್ರಮಕ್ಕೆ ಶರದ್ ಹಾಜರಾಗಿದ್ದೇ ಅದರೆ, ಅವರ ಮೇಲೆ ನಮಗಿರುವ ನಂಬಿಕೆ ನಾಶಗೊಳ್ಳಲಿದೆ. ಪಕ್ಷ ಸ್ಥಾಪನೆಗೆ ಶರದ್ ಕೂಡ ಮೂಲ ಸ್ತಂಭವಾಗಿದ್ದಾರೆಂದು ತಿಳಿಸಿದ್ದಾರೆ.
ಮಹಾ ಮೈತ್ರಿಕೂಟದ ಭ್ರಷ್ಟ ನಾಯಕರೊಂದಿಗೆ ತನ್ನನ್ನು ಗುರ್ತಿಸಿಕೊಳ್ಳಲು ನನಗೆ ಇಷ್ಟವಿಲ್ಲ. ಅವರೊಂದಿಗೆ ಸರ್ಕಾರ ಕೂಡಿಕೊಂಡು ಕೆಲಸ ಮಾಡುವುದು ಸಾಧ್ಯವಿಲ್ಲ ಎಂದ ಸಂದೇಶವನ್ನು ರವಾನಿಸಿದ್ದ ನಿತೀಶ್ ಕುಮಾರ್ ಅವರು ಅವರು ಕೆಲ ದಿನಗಳ ಹಿಂದಷ್ಟೇ ಹಠಾತ್ ಬೆಳವಣಿಗೆ ಎಂಬಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
ನಂತರ ಆರ್ ಜೆಡಿ ಸ್ನೇಹದಿಂದ ಹೊರ ಬಂದ ನಿತೀಶ್ ಕುಮಾರ್ ಅವರಿಗೆ ಬಿಜೆಪಿ ಬೆಂಬಲ ನೀಡಿತ್ತು. ಈ ಹಿನ್ನಲೆಯಲ್ಲಿ ಸರ್ಕಾರ ರಚನೆಗೆ ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ನಿತೀಶ್ ಕುಮಾರ್ ಅವರಿಗೆ ಆಹ್ವಾನ ನೀಡಿದ್ದರು. ಇದರಂತೆ ನಿತೀಶ್ ಕುಮಾರ್ ಅವರು ಬಿಹಾರ ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಅಧಿಕಾರ ಸ್ವೀಕಾರ ಮಾಡಿದ್ದರು.
ಇದಾದ ಬಳಿಕ ಎನ್ ಡಿಎ ಪಕ್ಷದೊಂದಿಗೆ ಸೇರ್ಪಡೆಗೊಳ್ಳುವಂತೆ ನಿತೀಶ್ ಕುಮಾರ್ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಅಧಿಕೃತ ಆಹ್ವಾನ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


