ದೇಶ

ಉಗ್ರರು ಒಳ ನುಸುಳಿರುವ ಶಂಕೆ: ಶೋಪಿಯಾನ್ ಜಿಲ್ಲೆಯ 9 ಗ್ರಾಮಗಳಲ್ಲಿ ತೀವ್ರ ಸೇನಾ ಶೋಧ

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರ ಹಾವಳಿ ಹೆಚ್ಚಾಗಿದ್ದು, ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಬೆನ್ನಲ್ಲೇ ಜಿಲ್ಲೆಯ 9 ಗ್ರಾಮಗಳಲ್ಲಿ ಸೇನಾಪಡೆಗಳು ತೀವ್ರ ಶೋಧ ನಡೆಸುತ್ತಿವೆ.

ಉಗ್ರರು ಒಳ ನುಸುಳಿರುವ ಶಂಕೆ: ಶೋಪಿಯಾನ್ ಜಿಲ್ಲೆಯ 9 ಗ್ರಾಮಗಳಲ್ಲಿ ತೀವ್ರ ಸೇನಾ ಶೋಧ
ಸಂಗ್ರಹ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರ ಹಾವಳಿ ಹೆಚ್ಚಾಗಿದ್ದು, ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಬೆನ್ನಲ್ಲೇ ಜಿಲ್ಲೆಯ 9 ಗ್ರಾಮಗಳಲ್ಲಿ ಸೇನಾಪಡೆಗಳು ತೀವ್ರ ಶೋಧ ನಡೆಸುತ್ತಿವೆ.

ಶನಿವಾರ ಮುಂಜಾನೆಯಿಂದಲೇ ಭಾರತೀಯ ಸೈನಿಕರು ತೀವ್ರ ಶೋಧ ನಡೆಸುತ್ತಿದ್ದು, ಶೋಪಿಯಾನ್ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತೆಯೇ ನಾಕಾಬಂದಿ ಹಾಕಲಾಗಿದ್ದು, ಉಗ್ರರು  ತಪ್ಪಿಸಿಕೊಳ್ಳದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಸೇನಾ ಮೂಲಗಳ ಪ್ರಕಾರ ಶೋಪಿಯಾನ್ ಜಿಲ್ಲೆಯ 9 ಗ್ರಾಮಗಳಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ಚಕೂರ, ಮಂತ್ರಿಬಗ್, ಝೈಪೋರಾ, ಪ್ರತಾಬ್ ಪೋರಾ, ಟಾಕಿಪೋರಾ, ರಾಣಿಪೋರಾ, ರತ್ನಿಪೋರಾ, ದಂಗಾಮ್ ಮತ್ತು  ವಂಗಾಮ್ ಸೇರಿದಂತೆ 9 ಗ್ರಾಮಗಳಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.