ಬಿಹಾರ ಸಿಎಂ ನಿತೀಶ್ ಅಮಿತ್ ಶಾ ಸೇವಕನಂತೆ ಕೆಲಸ ಮಾಡುತ್ತಿದ್ದಾರೆ: ಕಾಂಗ್ರೆಸ್
ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸೇವಕನಂತೆ ಕೆಲಸ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಶನಿವಾರ ಹೇಳಿದೆ...

Published On :
ನವದೆಹಲಿ: ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸೇವಕನಂತೆ ಕೆಲಸ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಶನಿವಾರ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರು, ನಿತೀಶ್ ಕುಮಾರ್ ಅವರ ನಿರ್ಧಾರದಿಂದ ಜೆಡಿಯು ಪಕ್ಷದ ಹಲವಾರು ನಾಯಕರು ತಲೆ ಕೆಡಿಸಿಕೊಂಡಿದ್ದಾರೆ. ನಿತೀಶ್ ಅವರ ನಿರ್ಧಾರ ಎಲ್ಲರಲ್ಲೂ ಆಘಾತವನ್ನುಂಟು ಮಾಡಿತ್ತು. ನಿತೀಶ್ ಮಾಡಿದಂತೆ ಈ ವರೆಗೂ ಯಾವುದೇ ನಾಯಕರೂ ಮಾಡಿರಲಿಲ್ಲ. ನಿತೀಶ್ ನೈತಿಕತೆಯನ್ನು ಹತ್ತಿಕ್ಕಿದ್ದಾರೆಂದು ಹೇಳಿದ್ದಾರೆ.
ಬಿಹಾರ ರಾಜ್ಯದಲ್ಲಿ ಅತ್ಯಂತ ದುರ್ಬಲ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದಿದ್ದರು. ಒಂದು ಸಮಯದಲ್ಲಿ ನಿತೀಶ್ ಅವರು ಅತ್ಯಂತ ಗೌರವಯುತ ನಾಯಕರಾಗಿದ್ದರು. ಇದೀಗ ಅವರು ಅಮಿತ್ ಶಾ ಅವರ ಸೇವಕರಂತೆ ಕೆಲಸ ಮಾಡುತ್ತಿದ್ದಾರೆ. ಜೆಡಿಯುನಲ್ಲಿರುವ ಎಲ್ಲಾ ಗೌರವಯುತ ನಾಯಕರು ಪಕ್ಷದಿಂದ ಹೊರಬಹುದೆಂದು ನಾನು ನಂಬಿದ್ದೇನೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


