ಕಾಶ್ಮೀರ: ಗೋವು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ
ಸುಮಾರು ಎರಡು ಡಜನ್ ಗೋವುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಜಮ್ಮು ....

Published On :
ಜಮ್ಮು: ಸುಮಾರು ಎರಡು ಡಜನ್ ಗೋವುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ರಾಜೋರಿ ಜಿಲ್ಲೆಯಲ್ಲಿ ವಾಹನವೊಂದರಲ್ಲಿ 25 ಗೋವುಗಳನ್ನು ಕಳ್ಳ ಸಾಗಣೆ ಮಾಡಲು ಯತ್ನಿಸುತ್ತಿದ್ದ ಮೊಹಮ್ಮದ್ ಇಖ್ಬಾಲ್ ಮತ್ತು ಮೊಹಮ್ಮದ್ ಅಶ್ರಫ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧಾಲ್ ಬಳಿ ಗೋವು ಸಾಗಿಸುತ್ತಿದ್ದ ವಾಹನವನ್ನು ತಡೆದ ಪೊಲೀಸರು, ಗೋವು ಸಾಗಣೆಗೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳನ್ನು ಕೇಳಿದ್ದಾರೆ. ಆದರೆ ಯಾವುದೇ ದಾಖಲೆ ನೀಡದ ಹಿನ್ನೆಲೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇಲ್ನೋಟಕ್ಕೆ ಆರೋಪಿಗಳು ಗೋವುಗಳನ್ನು ಕಳ್ಳ ಸಾಗಣೆ ಮಾಡಲು ಯತ್ನಿಸುತ್ತಿರುವುದು ಪತ್ತೆಯಾಗಿದ್ದು, ಮೊಹಮ್ಮದ್ ಇಖ್ಬಾಲ್ ಮತ್ತು ಮೊಹಮ್ಮದ್ ಅಶ್ರಫ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu and Kashmirಇಬ್ಬರ ಬಂಧನTwo Heldtrying to smuggle bovine animalsಗೋವು ಕಳ್ಳಸಾಗಣೆ ಯತ್ನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


