ದೇಶ

ಶೌಚಾಲಯವಿಲ್ಲದ ಮನೆ: ಮಹಿಳೆಗೆ ರಾಜಸ್ಥಾನ ಕೋರ್ಟ್ ನಿಂದ ವಿಚ್ಛೇದನ ಮಂಜೂರು!

ಮನೆಯಲ್ಲಿ ಶೌಚಾಲಯ ನಿರ್ಮಿಸದ ಗಂಡನಿಂದ ವಿಚ್ಛೇದನ ಪಡೆಯಲು ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್ ಮಾನ್ಯ ಮಾಡಿದ್ದು, ಆಕೆಗೆ ವಿಚ್ಛೇದನ ಮಂಜೂರು ಮಾಡಿದೆ.

ಶೌಚಾಲಯವಿಲ್ಲದ ಮನೆ: ಮಹಿಳೆಗೆ ರಾಜಸ್ಥಾನ ಕೋರ್ಟ್ ನಿಂದ ವಿಚ್ಛೇದನ ಮಂಜೂರು!
ರಾಜಸ್ಥಾನ
Published On :
ಜೈಪುರ: ಮನೆಯಲ್ಲಿ ಶೌಚಾಲಯ ನಿರ್ಮಿಸದ ಗಂಡನಿಂದ ವಿಚ್ಛೇದನ ಪಡೆಯಲು ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್ ಮಾನ್ಯ ಮಾಡಿದ್ದು, ಆಕೆಗೆ ವಿಚ್ಛೇದನ ಮಂಜೂರು ಮಾಡಿದೆ. 
ಕೌಟುಂಬಿಕ ನ್ಯಾಯಾಲಯ ಮಹಿಳೆಗೆ ವಿಚ್ಛೇದನ ಮಂಜೂರು ಮಾಡಿದ್ದು, ಮನೆಯಲ್ಲಿ ಶೌಚಾಲಯ ನಿರ್ಮಾಣ ಮಾಡದೇ ಇರುವುದು ಪತ್ನಿ ವಿರುದ್ಧದ ಕ್ರೌರ್ಯ ಎಂದು ಕೋರ್ಟ್ ಅಭಿಪ್ರಾಯಪಟ್ಟಿದ್ದು, ವಿಚ್ಛೇದನಕ್ಕೆ ಅರ್ಹ ಎಂದು ಹೇಳಿದೆ. 2011 ರಲ್ಲಿ ವಿವಾಹವಾದ ರಾಜಸ್ಥಾನದ ಮಹಿಳೆ ಮನೆಯಲ್ಲಿ ಶೌಚಾಲಯ ನಿರ್ಮಿಸಲು ಪದೇ ಪದೇ ಮನವಿ ಮಾಡಿದ್ದರಾದರೂ ಶೌಚಾಲಯ ನಿರ್ಮಾಣ ಮಾಡಲು ಪತಿ ನಿರಾಕರಿಸಿದ್ದರಿಂದ 2015 ರಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. 
ಮನೆಯಲ್ಲಿ ಶೌಚಾಲಯ ಇಲ್ಲದೇ ಇರುವುದರಿಂದ ತನ್ನ ಘನತೆಗೆ ಧಕ್ಕೆ ಉಂಟಾಗುತ್ತಿದೆ ಎಂದು ಮಹಿಳೆ ವಿಚ್ಛೇದನಕ್ಕೆ ಕಾರಣ ನೀಡಿದ್ದರು. ಗ್ರಾಮದ ಬಹುತೇಕ ಮಹಿಳೇಯರು ಬಯಲು ಶೌಚವನ್ನೇ ಆಧರಿಸಿದ್ದರಿಂದ ಪತ್ನಿಯ ಬೇಡಿಕೆಯನ್ನು ಪತಿ ವಿಚಿತ್ರವೆಂಬಂತೆ ಕಂಡಿದ್ದಾನೆ. ಮಹಿಳೆಯ ಕುಟುಂಬದವರು ಮನೆಯಲ್ಲಿ ಶೌಚಾಲಯ ನಿರ್ಮಾಣ ಮಾಡದೇ ಇದ್ದಿದ್ದಕ್ಕೆ ಯಾವುದೇ ಆಕ್ಷೇಪ ವ್ಯಕ್ತಪಡಿಸಲಿಲ್ಲ ಎಂದೂ ಪತಿ ಸಮರ್ಥನೆ ನೀಡಿದ್ದಾನೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.