ಬಾಲಕಿ ಮೇಲೆ ಪೊಲೀಸ್-ಗ್ರಾಮದ ಮುಖಂಡನಿಂದ ಸಾಮೂಹಿಕ ಅತ್ಯಾಚಾರ, ಸುದ್ದಿ ತಿಳಿದು ತಂದೆ ಸಾವು
ತಮ್ಮ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ವಿಷಯ ತಿಳಿದ ತಂದೆ ಆಘಾತದಿಂದ ಕೊನೆಯುಸಿರೆಳೆದಿರುವ ದಾರುಣ ಘಟನೆ...

Published On :
ಬಾಲಿಯಾ(ಉತ್ತರಪ್ರದೇಶ): ತಮ್ಮ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ವಿಷಯ ತಿಳಿದ ತಂದೆ ಆಘಾತದಿಂದ ಕೊನೆಯುಸಿರೆಳೆದಿರುವ ದಾರುಣ ಘಟನೆ ಉತ್ತರಪ್ರದೇಶದ ಬಾಲಿಯಾದಲ್ಲಿ ನಡೆದಿದೆ.
ಬಾಲಿಯಾದ ರಿಯೊಟಿ ಗ್ರಾಮದ ಮುಖಂಡ ಮತ್ತು ಪೊಲೀಸ್ ಪೇದೆ ಇಬ್ಬರು ಸೇರಿ ಅದೇ ಊರಿನ ಅಪ್ರಾಪ್ತ ಬಾಲಕಿ ಮೇಲೆ ಶುಕ್ರವಾರ ರಾತ್ರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಅವರ ವಿರುದ್ಧ ಐಪಿಸಿ ಸೆಕ್ಷನ್ 354, 306 ಮತ್ತು ಪೊಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ನು ಮಗಳ ಮೇಲೆ ಸಾಮೂಹಿತ ಅತ್ಯಾಚಾರ ನಡೆಸಿದ್ದಾರೆ ಎಂದು ಸುದ್ದಿ ತಿಳಿದ ಆಕೆಯ ತಂದೆ ಆಘಾತದಿಂದಾಗಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಶುಕ್ರವಾರ ರಾತ್ರಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಪೇದೆ ಮತ್ತು ಗ್ರಾಮದ ಮುಖಂಡ ಸಾಮೂಹಿಕ ಅತ್ಯಾಚಾರಕ್ಕೆ ಮುಂದಾಗಿದ್ದರು ಈ ವೇಳೆ ಆಕೆ ಕಿರುಚಿಕೊಂಡಿದ್ದರಿಂದ ಗ್ರಾಮಸ್ಥರು ಘಟನಾ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಪೊಲೀಸ್ ಪೇದೆ ಸ್ಥಳದಿಂದ ಪರಾರಿಯಾಗಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


