ದೇಶ

ಮಹಾ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿಗೆ ಭಾರಿ ಗೆಲುವು, ಶಿವಸೇನೆಗೆ ಹಿನ್ನಡೆ!

ಮಹಾರಾಷ್ಟ್ರದ ಮೀರಾ-ಭಯಾಂದರ್ ಪುರಸಭೆಯ 95 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 65 ಸ್ಥಾನಗಳನ್ನು ಪಡೆದಿದ್ದು, ಭಾರಿ ಗೆಲುವು ಸಾಧಿಸಿದೆ.

ಮಹಾ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿಗೆ ಭಾರಿ ಗೆಲುವು, ಶಿವಸೇನೆಗೆ ಹಿನ್ನಡೆ!
BJP
Published On :
ಮುಂಬೈ: ಮಹಾರಾಷ್ಟ್ರದ ಮೀರಾ-ಭಯಾಂದರ್ ಪುರಸಭೆಯ 95 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 65 ಸ್ಥಾನಗಳನ್ನು ಪಡೆದಿದ್ದು, ಭಾರಿ ಗೆಲುವು ಸಾಧಿಸಿದೆ. 
ಮೈತ್ರಿ ಸರ್ಕಾರದ ಹೊರತಾಗಿಯೂ ಪ್ರತ್ಯೇಕವಾಗಿ ಸ್ಪರ್ಧಿಸಿದ್ದ ಶಿವಸೇನೆ ಕೇವಲ 22 ಸ್ಥಾನಗಳನ್ನು ಪಡೆದಿದ್ದು ತೀವ್ರ ಹಿನ್ನಡೆ ಎದುರಿಸಿದೆ. 2012 ರ ಚುನಾವಣೆಯಲ್ಲಿ 26 ಸ್ಥಾನಗಳನ್ನು ಪಡೆದಿದ್ದ ಎನ್ ಸಿ ಪಿ ಈ ಬಾರಿ ಒಂದೇ ಒಂದು ಸ್ಥಾನವನ್ನೂ ಗೆಲ್ಲದೇ ತೀವ್ರ ಮುಖಭಂಗ ಎದುರಿಸಿದೆ. ಇನ್ನು ಕಾಂಗ್ರೆಸ್ ನ ಸ್ಥಾನಗಳೂ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಕುಗ್ಗಿದ್ದು, 19 ರಿಂದ 1೦ ಸ್ಥಾನಗಳಿಗೆ ಇಳಿಕೆಯಾಗಿದೆ. 
ಕಳೆದ ಬಾರಿ 1 ಸ್ಥಾನ ಗೆದ್ದಿದ್ದ ಎಂಎನ್ಎಸ್ ಈ ಬಾರಿ ಒಂದೂ ಸ್ಥಾನವನ್ನು ಗೆದ್ದಿಲ್ಲ. ಮಹಾರಾಷ್ಟ್ರದ ಮೀರಾ-ಭಯಾಂದರ್ ಪುರಸಭೆಗೆ  ಭಾನುವಾರ ನಡೆದ ಚುನಾವಣೆಯಲ್ಲಿ 509 ಅಭ್ಯರ್ಥಿಗಳು ಕಣದಲ್ಲಿ ಸ್ಪರ್ಧಿಸಿದ್ದರು. ಫಲಿತಾಂಶದ ಬಗ್ಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂತಸ ವ್ಯಕ್ತಪಡಿಸಿದ್ದು ಸರ್ಕಾರದ ಅಭಿವೃದ್ಧಿ ನೋಡಿ ಜನ ಬಿಜೆಪಿಯನ್ನು ಗೆಲ್ಲಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.