ದೇಶ

ಕಾಶ್ಮೀರ ಪ್ರತ್ಯೇಕತಾವಾದಿಗಳ ಪ್ರಕರಣ: ಆ.31 ರ ವರೆಗೆ ವಾನಿ ಜೈಲಿಗೆ

ಭಯೋತ್ಪಾದಕರಿಗೆ ಹಣ ಸಹಾಯ ಮಾಡುತ್ತಿದ್ದ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಪ್ರಕರಣದಕ್ಕೆ ಸಂಬಂಧಿಸಿದಂತೆ ಹವಾಲ ಡೀಲರ್ ಮೊಹಮ್ಮದ್ ಅಸ್ಲಮ್ ವಾನಿಯನ್ನು ಬಂಧಿಸಲಾಗಿದ್ದು, ಆ.31 ರ ವರೆಗೆ ಜೈಲಿಗೆ ಕಳಿಸಲಾಗಿದೆ.

ಕಾಶ್ಮೀರ ಪ್ರತ್ಯೇಕತಾವಾದಿಗಳ ಪ್ರಕರಣ: ಆ.31 ರ ವರೆಗೆ ವಾನಿ ಜೈಲಿಗೆ
ಕಾಶ್ಮೀರ ಪ್ರತ್ಯೇಕತಾವಾದಿಗಳ ಪ್ರಕರಣ: ಆ.31 ರ ವರೆಗೆ ವಾನಿ ಜೈಲಿಗೆ
Published On :
ನವದೆಹಲಿ: ಭಯೋತ್ಪಾದಕರಿಗೆ ಹಣ ಸಹಾಯ ಮಾಡುತ್ತಿದ್ದ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಪ್ರಕರಣದಕ್ಕೆ ಸಂಬಂಧಿಸಿದಂತೆ ಹವಾಲ ಡೀಲರ್ ಮೊಹಮ್ಮದ್ ಅಸ್ಲಮ್ ವಾನಿಯನ್ನು ಬಂಧಿಸಲಾಗಿದ್ದು, ಆ.31 ರ ವರೆಗೆ ಜೈಲಿಗೆ ಕಳಿಸಲಾಗಿದೆ. 
ದಶಕಗಳ ಹಿಂದಿನ ಅಕ್ರಮ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಶಬೀರ್ ಶಾ ಒಳಗೊಂಡ ಪ್ರಕರಣ ಇದಾಗಿದ್ದು, ಹೆಚ್ಚಿನ ತನಿಖೆಗಾಗಿ ದೆಹಲಿ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಿ ಆ.31 ವರೆಗೆ ಜೈಲಿಗೆ ಕಳಿಸಿದೆ. 
ಜಾರಿ ನಿರ್ದೇಶನಾಲಯದ ಅರ್ಜಿಯನ್ನು ಪುರಸ್ಕರಿಸಿದ ನ್ಯಾ.ಜಸ್ಜೀತ್ ಜೌರ್ ಆ.31 ರ ವರೆಗೆ ಹವಾಲ ಡೀಲರ್ ಮೊಹಮ್ಮದ್ ಅಸ್ಲಮ್ ವಾನಿಯನ್ನು ಜೈಲಿಗೆ ಕಳಿಸಿ ಆದೇಶ ಹೊರಡಿಸಿದ್ದಾರೆ. 2 ವಾರಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ವಾನಿಯನ್ನು ಕೋರ್ಟ್ ಎದುರು ಹಾಜರುಪಡಿಸಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.