ಭೀಕರ ಅಪಘಾತ: ವೇಗವಾಗಿ ಕಾರು ಗುದ್ದಿದ್ದರೂ ಪವಾಡ ಸದೃಶ್ಯ ಬದುಕುಳಿದ ಮಹಿಳೆ
ರಸ್ತೆ ಕ್ರಾಸ್ ಮಾಡುವಾಗ ಕಾರೊಂದು ಬೈಕ್ ಗೆ ಡಿಕ್ಕಿ ಹೊಡಿದ್ದು ಪರಿಣಾಮ ಬೈಕ್ ಓಡಿಸುತ್ತಿದ್ದ ಮಹಿಳೆ ಗಾಳಿಯಲ್ಲಿ ಹಾರಿ ಕೆಳಗೆ ಬಿದ್ದು ಗಂಭೀರವಾಗಿ...

Published On :
ನಮಕ್ಕಲ್ (ತಮಿಳುನಾಡು): ರಸ್ತೆ ಕ್ರಾಸ್ ಮಾಡುವಾಗ ಕಾರೊಂದು ಬೈಕ್ ಗೆ ಡಿಕ್ಕಿ ಹೊಡಿದ್ದು ಪರಿಣಾಮ ಬೈಕ್ ಓಡಿಸುತ್ತಿದ್ದ ಮಹಿಳೆ ಗಾಳಿಯಲ್ಲಿ ಹಾರಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಅಪಘಾತದ ಭೀಕರತೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತಮಿಳುನಾಡಿನ ನಮಕ್ಕಲ್ ಜಿಲ್ಲೆಯ ಪರಮಟಿವಲೂರ್ ಬಳಿಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಓಡಿಸುತ್ತಿದ್ದ ಮಹಿಳೆ ರಸ್ತೆ ಕ್ರಾಸ್ ಮಾಡುವಾಗ ವೇಗವಾಗಿ ಬಂದ ಕಾರು ಆಕೆಯ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಹಿಳೆ 10 ಅಡಿ ದೂರಕ್ಕೆ ಹಾರಿದ್ದು ಪವಾಡ ಸದೃಶ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು 30 ವರ್ಷದ ಪ್ರಿಯಾ ಎಂದು ಗುರುತಿಸಲಾಗಿದೆ. ಇನ್ನು ಅಪಘಾತ ಕುರಿತಂತೆ ಪ್ರಿಯಾಳ ಪತಿ ಜ್ಞಾನಶೇಖರ್ ಅಪಘಾತದಿಂದಾಗಿ ಪ್ರಿಯಾಳ ಶ್ವಾಸಕೋಶದ ಎಲುಬುಗಳು ಮುರಿದಿದ್ದು ಆಕೆ ಸ್ವಲ್ಪ ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಹೇಳಿದ್ದಾರೆ.
ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಎಸ್ ಹರಿಹರನ್ ನಮಕ್ಕಲ್ ಮೂಲದವರಾಗಿದ್ದು ಬೆಂಗಳೂರಿನ ಸಾಫ್ಟ್ ವೇರ್ ಉದ್ಯೋಗಿ ಎಂದು ತಿಳಿದುಬಂದಿದೆ. ಮೊಹನೂರ್ ಪೊಲೀಸರು ಹರಿಹರನ್ ವಿರುದ್ಧ ಅತೀ ವೇಗದ ಚಾಲನೆ ಆರೋಪದ ಮೇಲೆ ಕೇಸ್ ದಾಖಲಿಸಿದ್ದು ಕಾರನ್ನು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


