ದೇಶ

ರೈಲ್ವೆ ಮಂಡಳಿಯ ನೂತನ ಅಧ್ಯಕ್ಷರಾಗಿ ಅಶ್ವನಿ ಲೋಹನಿ ನೇಮಕ

ಸರಣಿ ರೈಲ್ವೆ ಅಪಘಾತಗಳ ಹಿನ್ನೆಲೆಯಲ್ಲಿ ಎಕೆ ಮಿತ್ತಲ್ ಅವರ ರಾಜೀನಾಮೆಯಿಂದ ತೆರವುಗೊಂಡಿದ್ದ ರೈಲ್ವೆ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಅಶ್ವನಿ ಲೋಹನಿ ಅವರನ್ನು ನೇಮಕ ಮಾಡಲಾಗಿದೆ.

ರೈಲ್ವೆ ಮಂಡಳಿಯ ನೂತನ ಅಧ್ಯಕ್ಷರಾಗಿ ಅಶ್ವನಿ ಲೋಹನಿ ನೇಮಕ
ಅಶ್ವನಿ ಲೋಹನಿ
Published On :
ನವದೆಹಲಿ: ಸರಣಿ ರೈಲ್ವೆ ಅಪಘಾತಗಳ ಹಿನ್ನೆಲೆಯಲ್ಲಿ ಎಕೆ ಮಿತ್ತಲ್ ಅವರ ರಾಜೀನಾಮೆಯಿಂದ ತೆರವುಗೊಂಡಿದ್ದ ರೈಲ್ವೆ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಅಶ್ವಿನಿ ಲೋಹನಿ ಅವರನ್ನು ನೇಮಕ ಮಾಡಲಾಗಿದೆ. ಅಶ್ವನಿ ಲೋಹನಿ ಅವರ ನೇಮಕದ ಬಗ್ಗೆ ಕ್ಯಾಬಿನೆಟ್ ನೇಮಕಾತಿ ಸಮಿತಿಯಿಂದ ಅಧಿಕೃತ ಪ್ರಕಟಣೆ ನೀಡಿದೆ. 
ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ನೀಡಲು ಮುಂದಾದ ಬೆಳವಣಿಗೆ ನಡೆದ ಕೆಲವೇ ಗಂಟೆಗಳಲ್ಲಿ ರೈಲ್ವೆ ಮಂಡಳಿಗೆ ನೂತನ ಅಧ್ಯಕ್ಷರ ನೇಮಕವಾಗಿದೆ. ಮೆಕಾನಿಕಲ್ ಇಂಜಿನಿಯರಿಂಗ್ ಪದವೀಧರರಾಗಿರುವ ಲೋಹನಿ ಪ್ರಸ್ತುತ ಏರ್ ಇಂಡಿಯಾದ ಎಂಡಿ ಹಾಗೂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದಾರೆ.
ಇಂಡಿಯನ್ ರೈಲ್ವೆ ಸ್ಟೋರ್ಸ್ ನ 1976 ಬ್ಯಾಚ್ ನ ನಿವೃತ್ತ ಅಧಿಕಾರಿಯಾಗಿರುವ ಅಶ್ವನಿ ಲೋಹನಿ ಅವರನ್ನು ಕೇಂದ್ರ ಸರ್ಕಾರ 2016 ರಲ್ಲಿ ಮರುನೇಮಕ ಮಾಡಿ ಅಧಿಕಾರಾವಧಿಯನ್ನು 2 ವರ್ಷ ಹೆಚ್ಚಿಸಿದ್ದು 2018 ರ ಅವರೆಗೆ ಸೇವೆಯಲ್ಲಿರಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.